Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:28 - ಪರಿಶುದ್ದ ಬೈಬಲ್‌

28 ಅಬ್ಷಾಲೋಮನು ಎರಡು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಇದ್ದನು. ಆದರೂ ರಾಜನಾದ ದಾವೀದನನ್ನು ಭೇಟಿಯಾಗಲು ಅವನಿಗೆ ಅವಕಾಶ ದೊರಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ಎರಡು ವರ್ಷ ಜೆರುಸಲೇಮಿನಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರುಷ ಯೆರೂಸಲೇವಿುನಲ್ಲಿ ವಾಸವಾಗಿದ್ದ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:28
7 ತಿಳಿವುಗಳ ಹೋಲಿಕೆ  

ಆದರೆ ರಾಜನಾದ ದಾವೀದನು, “ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿ ಹೋಗಲಿ. ಅವನು ನನ್ನನ್ನು ನೋಡಲು ಬರುವುದು ಬೇಡ” ಎಂದನು. ಆದ್ದರಿಂದ ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದನು. ಅಬ್ಷಾಲೋಮನು ರಾಜನನ್ನು ನೋಡಲು ಹೋಗಲಿಲ್ಲ.


ಆದ್ದರಿಂದ ಅಬ್ಷಾಲೋಮನು ಯೋವಾಬನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಅಬ್ಷಾಲೋಮನನ್ನು ರಾಜನ ಹತ್ತಿರಕ್ಕೆ ಕಳುಹಿಸಿ ಕೊಡುವಂತೆ ಈ ಸಂದೇಶಕರು ಯೋವಾಬನನ್ನು ಕೇಳಿದರು. ಆದರೆ ಯೋವಾಬನು ಅಬ್ಷಾಲೋಮನ ಬಳಿಗೆ ಬರಲಿಲ್ಲ. ಅಬ್ಷಾಲೋಮನು ಎರಡನೆಯ ಬಾರಿ ಸಂದೇಶವನ್ನು ಕಳುಹಿಸಿದನು. ಆದರೂ ಯೋವಾಬನು ಬರಲಿಲ್ಲ.


ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.


ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.


ರಾಜನಾದ ಸೊಲೊಮೋನನು ಅದೋನೀಯನನ್ನು ಕರೆತರಲು ಕೆಲವು ಜನರನ್ನು ಕಳುಹಿಸಿದನು. ಅವರು ಅದೋನೀಯನನ್ನು ರಾಜನಾದ ಸೊಲೊಮೋನನ ಬಳಿಗೆ ಕರೆದುತಂದರು. ಅದೋನೀಯನು ರಾಜನಾದ ಸೊಲೊಮೋನನ ಬಳಿಗೆ ಬಂದು, ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ, “ಮನೆಗೆ ಹೋಗು” ಎಂದನು.


ನಂತರ ರಾಜನು ಶಿಮ್ಮಿಯನ್ನು ಕರೆತರಲು ಕಳುಹಿಸಿದನು. ರಾಜನು ಅವನಿಗೆ, “ಜೆರುಸಲೇಮಿನಲ್ಲಿ ನಿನಗಾಗಿ ಒಂದು ಮನೆಯನ್ನು ನಿರ್ಮಿಸು. ಆ ಮನೆಯಲ್ಲಿ ವಾಸಮಾಡು, ನಗರವನ್ನು ಬಿಟ್ಟುಹೋಗದಿರು.


“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು