Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:3 - ಪರಿಶುದ್ದ ಬೈಬಲ್‌

3 ರಾಜನ ಬಳಿಗೆ ಹೋಗಿ, ನಾನು ಹೇಳಿಕೊಟ್ಟ ಮಾತುಗಳನ್ನು ಅವನಿಗೆ ಹೇಳು” ಎಂದು ಹೇಳಿದನು. ಯೋವಾಬನು ಬುದ್ಧಿವಂತಳಾದ ಆ ಸ್ತ್ರೀಗೆ ಮಾತಾಡಬೇಕಾದದ್ದನ್ನು ಹೇಳಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಣ್ಣೆ ಹಚ್ಚಿಕೊಳ್ಳದೆ ಅರಸನ ಬಳಿಗೆ ಹೋಗು; ಅಲ್ಲಿ ಈ ಮಾತುಗಳನ್ನು ಅವನಿಗೆ ಹೇಳು,” ಎಂದು ಆಜ್ಞಾಪಿಸಿ ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಣ್ಣೆ ಹಚ್ಚಿಕೊಳ್ಳದೆ ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು ಎಂದು ಆಜ್ಞಾಪಿಸಿ ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು,” ಎಂದು ಹೇಳಿ ಯೋವಾಬನು ಅವಳಿಗೆ ಕಲಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:3
9 ತಿಳಿವುಗಳ ಹೋಲಿಕೆ  

ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ನಿಮ್ಮ ಆಣೆಯಾಗಿಯೂ, ನೀವು ಹೇಳಿದ್ದು ಸರಿ! ನಿಮ್ಮ ಸೇವಕನಾದ ಯೋವಾಬನು ಈ ವಿಷಯಗಳನ್ನು ಹೇಳಲು ನನಗೆ ತಿಳಿಸಿದನು.


ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋನನಿಗೆ ತಿಳಿಸು. ಆರೋನನು ಫರೋಹನೊಡನೆ ಸರಿಯಾಗಿ ಮಾತಾಡುವನು.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”


ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.


ಆಗ ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ತಿರುಗಿಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.


ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು.


ಕಾಸಿಫ್ಯದ ಇದ್ದೋ ಎಂಬವರಲ್ಲಿಗೆ ಕಳುಹಿಸಿದೆನು. ಇವನು ಕಾಸಿಫ್ಯದ ನಿವಾಸಿಗಳ ನಾಯಕನಾಗಿದ್ದನು. ಇವನ ಸಂಬಂಧಿಕರು ಕಾಸಿಫ್ಯದ ದೇವಾಲಯದ ಸೇವಕರಾಗಿದ್ದಾರೆ. ನಾವು ಕಟ್ಟುವ ದೇವಾಲಯದಲ್ಲಿ ಸೇವೆ ಮಾಡುವವರನ್ನು ಇದ್ದೋ ಕಳುಹಿಸಬೇಕೆಂಬ ಉದ್ದೇಶದಿಂದಲೇ ನಾನು ಅವರನ್ನು ಅವರ ಬಳಿಗೆ ಕಳುಹಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು