2 ಸಮುಯೇಲ 14:30 - ಪರಿಶುದ್ದ ಬೈಬಲ್30 ಆಗ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲದ ಪಕ್ಕದಲ್ಲಿ ಯೋವಾಬನ ಹೊಲವಿದೆ. ಅವನು ಆ ಹೊಲದಲ್ಲಿ ಜವೆಗೋಧಿಯನ್ನು ಬೆಳೆದಿದ್ದಾನೆ. ಹೋಗಿ ಆ ಜವೆಗೋಧಿಯನ್ನು ಸುಟ್ಟುಬಿಡಿರಿ” ಎಂದು ಹೇಳಿದನು. ಅಬ್ಷಾಲೋಮನ ಸೇವಕರು ಹೋಗಿ ಯೋವಾಬನ ಹೊಲದಲ್ಲಿ ಬೆಂಕಿಯನ್ನು ಹಚ್ಚಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿ, ಸಮೀಪದಲ್ಲೇ ಯೋವಾಬನ ಜವೆಗೋದಿಹೊಲವುಂಟಲ್ಲವೇ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ,” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ - ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಹೊಲವುಂಟಲ್ಲಾ; ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ ಎಂದು ಆಜ್ಞಾಪಿಸಿದನು; ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದ್ದರಿಂದ ಅವನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲಕ್ಕೆ ಸಮೀಪವಾಗಿ ಯೋವಾಬನ ಹೊಲವಿದೆ. ಅದರಲ್ಲಿ ಜವೆಗೋಧಿ ಇದೆ. ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ,” ಎಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು. ಅಧ್ಯಾಯವನ್ನು ನೋಡಿ |