Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:6 - ಪರಿಶುದ್ದ ಬೈಬಲ್‌

6 ನನಗೆ ಇಬ್ಬರು ಗಂಡುಮಕ್ಕಳಿದ್ದರು. ಈ ಇಬ್ಬರು ಗಂಡುಮಕ್ಕಳು ಜಗಳಮಾಡುತ್ತಾ ಹೊರಗೆ ಮೈದಾನದಲ್ಲಿದ್ದರು. ಅವರನ್ನು ತಡೆಯುವ ಬೇರೊಬ್ಬನು ಅಲ್ಲಿರಲಿಲ. ಒಬ್ಬ ಮಗನು ಮತ್ತೊಬ್ಬನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಇವರು ಇಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರಾರೂ ಇರಲಿಲ್ಲ. ಆದುದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು; ಅಲ್ಲಿ ಬಿಡಿಸುವವರಾರೂ ಇರಲಿಲ್ಲವಾದದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನಿನ್ನ ಸೇವಕಳಿಗೆ ಇಬ್ಬರು ಪುತ್ರರಿದ್ದರು. ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು. ಅವರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ, ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:6
7 ತಿಳಿವುಗಳ ಹೋಲಿಕೆ  

ಮರುದಿನ, ಇಬ್ಬರು ಇಬ್ರಿಯರು ಜಗಳವಾಡುತ್ತಿರುವುದನ್ನು ಕಂಡ ಮೋಶೆಯು ಅವರಲ್ಲಿ ತಪ್ಪು ಮಾಡಿದವನಿಗೆ, “ನಿನ್ನ ನೆರೆಯವನಿಗೆ ಯಾಕೆ ಹೊಡೆಯುತ್ತಿರುವೆ?” ಎಂದು ಕೇಳಿದನು.


ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.


ರಾಜನಾದ ದಾವೀದನು ಅವಳಿಗೆ, “ನಿನ್ನ ಸಮಸ್ಯೆ ಏನು?” ಎಂದು ಕೇಳಿದನು. ಆ ಸ್ತ್ರೀಯು, “ನಾನೊಬ್ಬ ವಿಧವೆ. ನನ್ನ ಗಂಡನು ತೀರಿಕೊಂಡಿದ್ದಾನೆ.


ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.


ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.


ಅಬ್ಷಾಲೋಮನ ಸೇವಕರು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದುಬಿಟ್ಟರು. ಆದರೆ ದಾವೀದನ ಇತರ ಗಂಡುಮಕ್ಕಳೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನೇರಿ ತಪ್ಪಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು