2 ಸಮುಯೇಲ 14:7 - ಪರಿಶುದ್ದ ಬೈಬಲ್7 ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈಗ ನೋಡು, ಸಂಬಂಧಿಕರೆಲ್ಲಾ ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು - ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಣಿಂದ ಅಳಿಸಬೇಕೆಂದಿದ್ದಾರೆ ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು. ಅಧ್ಯಾಯವನ್ನು ನೋಡಿ |