2 ಸಮುಯೇಲ 14:8 - ಪರಿಶುದ್ದ ಬೈಬಲ್8 ಆಗ ರಾಜನು ಆ ಸ್ತ್ರೀಗೆ, “ಮನೆಗೆ ಹಿಂದಿರುಗು. ನಾನು ನಿನ್ನ ವಿಷಯದಲ್ಲಿ ಆಜ್ಞೆಗಳನ್ನು ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಅರಸನು, “ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಅರಸನು - ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |
ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.