Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:11 - ಪರಿಶುದ್ದ ಬೈಬಲ್‌

11 ಅಬ್ಷಾಲೋಮನು ತನ್ನೊಂದಿಗೆ ಬರಲು ಇನ್ನೂರು ಜನರನ್ನು ಆಹ್ವಾನಿಸಿದನು. ಆ ಜನರು ಜೆರುಸಲೇಮನ್ನು ಬಿಟ್ಟು ಅವನೊಂದಿಗೆ ಹೊರಟರು. ಆದರೆ ಅವನು ಯೋಚಿಸಿದ ಕಾರ್ಯವು ಅವರಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಬ್ಷಾಲೋಮನು ಜೆರುಸಲೇಮಿನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥಮನಸ್ಸಿನಿಂದ ಹೋದವರು; ಒಳಸಂಚಿನ ಸುಳಿವೇನೂ ಅವರಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಬ್ಷಾಲೋಮನು ಯೆರೂಸಲೇವಿುನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು; ಅವರಿಗೇನೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲಾದ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ಒಳಸಂಚನ್ನು ಏನೂ ತಿಳಿಯದೆ ಯಥಾರ್ಥ ಮನಸ್ಸುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:11
8 ತಿಳಿವುಗಳ ಹೋಲಿಕೆ  

ನೀವು ಪಟ್ಟಣದೊಳಕ್ಕೆ ಹೋದರೆ ಅವನನ್ನು ಕಾಣಬಹುದು. ನೀವು ಬೇಗನೆ ನೋಡಬೇಕೆಂದಿದ್ದರೆ, ಅವನು ಊಟ ಮಾಡುವುದಕ್ಕಾಗಿ ಆರಾಧನೆಯ ಸ್ಥಳಕ್ಕೆ ಹೋಗುವುದಕ್ಕಿಂತ ಮೊದಲೇ ಅವನನ್ನು ಕಾಣಬೇಕು. ದರ್ಶಿಯು ಯಜ್ಞವನ್ನು ಆಶೀರ್ವದಿಸಬೇಕಾಗಿರುವುದರಿಂದ ಅವನು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಆದ್ದರಿಂದ ನೀವು ಬೇಗನೆ ಹೋದರೆ ಅವನನ್ನು ಕಾಣಬಹುದು” ಎಂದು ಹೇಳಿದರು.


ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲಿ ನನ್ನ ಬಂಧುಗಳ ಮೇಲಾಗಲಿ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.


ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.


‘ಈಕೆ ನನಗೆ ತಂಗಿಯಾಗಬೇಕು’ ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ ‘ಅವನು ನನ್ನ ಸಹೋದರ’ ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು