Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:13 - ಪರಿಶುದ್ದ ಬೈಬಲ್‌

13 ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ಷಾಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನ ದಾವೀದನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನ ಬಳಿಗೆ ಒಬ್ಬ ದೂತನು ಬಂದು, “ಇಸ್ರಾಯೇಲರ ಹೃದಯಗಳು ಅಬ್ಷಾಲೋಮನ ಕಡೆ ತಿರುಗಿಕೊಂಡಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:13
7 ತಿಳಿವುಗಳ ಹೋಲಿಕೆ  

ಅಬೀಮೆಲೆಕನ ಸೋದರ ಮಾವಂದಿರು ಶೆಕೆಮಿನ ಹಿರಿಯರ ಜೊತೆ ಮಾತನಾಡಿ ಅವರಿಗೆ ಆ ಪ್ರಶ್ನೆಯನ್ನು ಕೇಳಿದರು. ಶೆಕೆಮಿನ ಹಿರಿಯರು ಅಬೀಮೆಲೆಕನ ಪಕ್ಷವಹಿಸಲು ನಿರ್ಧರಿಸಿದರು. ಆ ಹಿರಿಯರು, “ಎಷ್ಟೇ ಆದರೂ ಅವನು ನಮ್ಮ ಸಹೋದರ” ಎಂದರು.


ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.


ರಾಜನಾದ ದಾವೀದನ ಬಳಿಗೆ ತೀರ್ಪಿಗಾಗಿ ಬರುವ ಎಲ್ಲಾ ಇಸ್ರೇಲರಿಗೆ ಅಬ್ಷಾಲೋಮನು ಇದೇ ರೀತಿ ಮಾಡುತ್ತಿದ್ದನು. ಹೀಗೆ, ಅಬ್ಷಾಲೋಮನು ಇಸ್ರೇಲಿನ ಜನರೆಲ್ಲರ ಹೃದಯಗಳನ್ನು ಗೆದ್ದುಕೊಂಡನು.


ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ಇದನ್ನು ಕೇಳಿದ ಜನರೆಲ್ಲರೂ ರಾಜನಾದ ದಾವೀದನ ಈ ಕಾರ್ಯವನ್ನು ಮೆಚ್ಚಿಕೊಂಡರು.


ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು