2 ಸಮುಯೇಲ 15:14 - ಪರಿಶುದ್ದ ಬೈಬಲ್14 ಆಗ ದಾವೀದನು ಜೆರುಸಲೇಮಿನಲ್ಲಿ ತನ್ನೊಂದಿಗಿದ್ದ ತನ್ನ ಸೇವಕರಿಗೆಲ್ಲ, “ನಾವು ತಪ್ಪಿಸಿಕೊಳ್ಳಲೇಬೇಕು! ನಾವು ತಪ್ಪಿಸಿಕೊಳ್ಳದಿದ್ದರೆ ಅಬ್ಷಾಲೋಮನು ನಮ್ಮನ್ನು ಹೋಗಗೊಡಿಸುವುದಿಲ್ಲ. ಅಬ್ಷಾಲೋಮನು ನಮ್ಮನ್ನು ಹಿಡಿಯುವುದಕ್ಕಿಂತ ಮೊದಲೇ ಇಲ್ಲಿಂದ ಹೋಗಿಬಿಡೋಣ. ಅವನು ನಮ್ಮೆಲ್ಲರನ್ನೂ ನಾಶಮಾಡುತ್ತಾನೆ; ಅವನು ಜೆರುಸಲೇಮಿನ ಜನರನ್ನು ಕೊಂದುಹಾಕುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಅವನು ಜೆರುಸಲೇಮಿನಲ್ಲಿದ್ದ ತನ್ನ ಸೇವಕರಿಗೆ, “ಏಳಿ, ಓಡಿಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನು ಯೆರೂಸಲೇವಿುನಲ್ಲಿದ್ದ ತನ್ನ ಸೇವಕರಿಗೆ - ಏಳಿರಿ, ಓಡಿ ಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಸಮಸ್ತ ಸೇವಕರಿಗೆ, “ಏಳಿರಿ, ನಾವು ಓಡಿಹೋಗೋಣ. ಇಲ್ಲದಿದ್ದರೆ ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಂಡು ಹೋಗಲಾರೆವು. ಅವನು ಫಕ್ಕನೆ ನಮ್ಮನ್ನು ಹಿಡಿದು, ನಮ್ಮ ಮೇಲೆ ಕೇಡನ್ನು ಬರಮಾಡಿ, ಪಟ್ಟಣವನ್ನು ಖಡ್ಗದಿಂದ ಹೊಡೆಯದ ಹಾಗೆ ಹೊರಟು ಹೋಗುವುದಕ್ಕೆ ತ್ವರೆಮಾಡಿರಿ,” ಎಂದನು. ಅಧ್ಯಾಯವನ್ನು ನೋಡಿ |