Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:15 - ಪರಿಶುದ್ದ ಬೈಬಲ್‌

15 ರಾಜನ ಸೇವಕರು ರಾಜನಿಗೆ, “ನಿನ್ನ ನಿರ್ಧಾರದಂತೆ ನಾವು ಮಾಡುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೇವಕರು ಅರಸನಿಗೆ, “ನಮ್ಮ ಒಡೆಯರಾದ ಅರಸರಿಗೆ ಸರಿತೋಚಿದ್ದನ್ನೇ ಮಾಡಲು ಸಿದ್ಧರಾಗಿದ್ದೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೇವಕರು ಅರಸನಿಗೆ - ನಮ್ಮ ಒಡೆಯನಾದ ಅರಸನಿಗೆ ಸರಿತೋಚಿದ್ದನ್ನು ಮಾಡಸಿದ್ಧರಾಗಿದ್ದೇವೆ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅರಸನ ಸೇವಕರು ಅರಸನಿಗೆ, “ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ, ಅದನ್ನು ಮಾಡುವುದಕ್ಕೆ ನಿನ್ನ ಸೇವಕರು ಸಿದ್ಧವಾಗಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:15
8 ತಿಳಿವುಗಳ ಹೋಲಿಕೆ  

ಒಬ್ಬನಿಗೆ ಬಹಳ ಮಂದಿ ಸ್ನೇಹಿತರಿದ್ದರೆ, ಅದು ಅವನನ್ನು ನಾಶಮಾಡಬಹುದು. ಆದರೆ ನಿಜವಾದ ಸ್ನೇಹಿತನು ಸಹೋದರನಿಗಿಂತಲೂ ನಂಬಿಗಸ್ತನಾಗಿರುವನು.


ನಾನು ಹೇಳುವ ಕಾರ್ಯಗಳನ್ನು ನೀವು ಮಾಡಿದರೆ, ನೀವು ನನ್ನ ಸ್ನೇಹಿತರು.


ಆಗ ದಾವೀದನು ಜೆರುಸಲೇಮಿನಲ್ಲಿ ತನ್ನೊಂದಿಗಿದ್ದ ತನ್ನ ಸೇವಕರಿಗೆಲ್ಲ, “ನಾವು ತಪ್ಪಿಸಿಕೊಳ್ಳಲೇಬೇಕು! ನಾವು ತಪ್ಪಿಸಿಕೊಳ್ಳದಿದ್ದರೆ ಅಬ್ಷಾಲೋಮನು ನಮ್ಮನ್ನು ಹೋಗಗೊಡಿಸುವುದಿಲ್ಲ. ಅಬ್ಷಾಲೋಮನು ನಮ್ಮನ್ನು ಹಿಡಿಯುವುದಕ್ಕಿಂತ ಮೊದಲೇ ಇಲ್ಲಿಂದ ಹೋಗಿಬಿಡೋಣ. ಅವನು ನಮ್ಮೆಲ್ಲರನ್ನೂ ನಾಶಮಾಡುತ್ತಾನೆ; ಅವನು ಜೆರುಸಲೇಮಿನ ಜನರನ್ನು ಕೊಂದುಹಾಕುತ್ತಾನೆ” ಎಂದು ಹೇಳಿದನು.


ರಾಜನಾದ ದಾವೀದನು ತನ್ನ ಮನೆಯಲ್ಲಿದ್ದ ಎಲ್ಲಾ ಜನರೊಂದಿಗೆ ಹೊರಟನು. ಮನೆಯ ಉಸ್ತುವಾರಿಯನ್ನು ನೋಡಿಕೊಳ್ಳುವುದಕ್ಕಾಗಿ ರಾಜನು ತನ್ನ ಹತ್ತು ಮಂದಿ ಪತ್ನಿಯರನ್ನು ಅಲ್ಲಿಯೇ ಬಿಟ್ಟು,


ಯೋನಾತಾನನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಕನು, “ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು. ನಿನ್ನ ಕೆಲಸದಲ್ಲೆಲ್ಲಾ ನಾನು ನಿನ್ನೊಂದಿಗಿರುತ್ತೇನೆ” ಎಂದು ಹೇಳಿದನು.


ಚೀಬನು ರಾಜನಾದ ದಾವೀದನಿಗೆ, “ನಾನು ನಿನ್ನ ಸೇವಕ. ರಾಜನಾದ ಒಡೆಯನು ನನಗೆ ಆಜ್ಞಾಪಿಸಿದ್ದೆಲ್ಲವನ್ನೂ ನಾನು ಮಾಡುತ್ತೇನೆ” ಎಂದನು. ಆದ್ದರಿಂದ ಮೆಫೀಬೋಶೆತನು, ರಾಜನ ಗಂಡುಮಕ್ಕಳಲ್ಲಿ ಒಬ್ಬನಂತೆ, ದಾವೀದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು