Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:16 - ಪರಿಶುದ್ದ ಬೈಬಲ್‌

16 ರಾಜನಾದ ದಾವೀದನು ತನ್ನ ಮನೆಯಲ್ಲಿದ್ದ ಎಲ್ಲಾ ಜನರೊಂದಿಗೆ ಹೊರಟನು. ಮನೆಯ ಉಸ್ತುವಾರಿಯನ್ನು ನೋಡಿಕೊಳ್ಳುವುದಕ್ಕಾಗಿ ರಾಜನು ತನ್ನ ಹತ್ತು ಮಂದಿ ಪತ್ನಿಯರನ್ನು ಅಲ್ಲಿಯೇ ಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಅರಸನು ಮನೆಕಾಯುವುದಕ್ಕಾಗಿ ಹತ್ತುಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಅರಸನು ಮನೆಕಾಯುವದಕ್ಕಾಗಿ ಹತ್ತು ಮಂದಿ ಉಪ ಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು, ಅವನೂ, ಅವನ ಮನೆಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:16
12 ತಿಳಿವುಗಳ ಹೋಲಿಕೆ  

ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.


ದಾವೀದನು ಜೆರುಸಲೇಮಿನ ತನ್ನ ಅರಮನೆಗೆ ಬಂದನು. ದಾವೀದನು ಮನೆಕಾಯಲು ಬಿಟ್ಟುಹೋದ ತನ್ನ ಹತ್ತುಮಂದಿ ಉಪಪತ್ನಿಯರನ್ನು ಒಂದು ಮನೆಯಲ್ಲಿ ಇಟ್ಟಿದ್ದನು. ಈ ಮನೆಯನ್ನು ಕಾವಲುಗಾರರು ಕಾಯುತ್ತಿದ್ದರು. ಈ ಹೆಂಗಸರು ತಾವು ಸಾಯುವವರೆಗೆ ಈ ಮನೆಯಲ್ಲಿಯೇ ನೆಲೆಸಿದ್ದರು. ದಾವೀದನು ಅವರಿಗೆ ಆಹಾರ ವಸ್ತ್ರಗಳನ್ನು ಕೊಟ್ಟನು. ಆದರೆ ಅವನು ಅವರೊಂದಿಗೆ ಮಲಗಿಕೊಳ್ಳಲಿಲ್ಲ. ಅವರು ಸಾಯುವವರೆಗೆ ವಿಧವೆಯರಂತಿದ್ದರು.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


“ಯೆಹೋವನು ಹೇಳುವುದೇನೆಂದರೆ: ‘ನಾನು ನಿನಗೆ ತೊಂದರೆಯನ್ನುಂಟುಮಾಡುತ್ತೇನೆ. ನಿನ್ನ ಸ್ವಂತ ಕುಟುಂಬದಿಂದಲೇ ಈ ತೊಂದರೆಯು ಬರುತ್ತದೆ. ನಾನು ನಿನ್ನ ಪತ್ನಿಯರನ್ನು ತೆಗೆದುಕೊಂಡು ನಿನಗೆ ತೀರ ಹತ್ತಿರನಾಗಿರುವ ಒಬ್ಬ ವ್ಯಕ್ತಿಗೆ ಕೊಡುತ್ತೇನೆ. ಅವನು ನಿನ್ನ ಪತ್ನಿಯರ ಜೊತೆಯಲ್ಲಿ ಮಲಗುತ್ತಾನೆ. ಇದು ಎಲ್ಲರಿಗೂ ತಿಳಿಯುತ್ತದೆ.


ಅಬೀಗೈಲಳು ಬೇಗನೆ ಒಂದು ಕತ್ತೆಯ ಮೇಲೇರಿ, ದಾವೀದನ ಸಂದೇಶಕರೊಂದಿಗೆ ಹೊರಟುಹೋದಳು. ಅಬೀಗೈಲಳು ಐದು ಜನ ಸೇವಕಿಯರನ್ನು ತನ್ನೊಂದಿಗೆ ಕರೆದುಕೊಂಡು ಹೋದಳು. ಅವಳು ದಾವೀದನ ಹೆಂಡತಿಯಾದಳು.


ಈಗ ನಾನು ನಿನಗಾಗಿ ಈ ಕೊಡುಗೆಗಳನ್ನು ತಂದಿದ್ದೇನೆ. ನಿನ್ನನ್ನು ಹಿಂಬಾಲಿಸುತ್ತಿರುವ ನಿನ್ನ ಸೇವಕರಿಗೆ ದಯವಿಟ್ಟು ಇವುಗಳನ್ನು ಕೊಡು.


ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.


ರಾಜನ ಸೇವಕರು ರಾಜನಿಗೆ, “ನಿನ್ನ ನಿರ್ಧಾರದಂತೆ ನಾವು ಮಾಡುತ್ತೇವೆ” ಎಂದರು.


ತನ್ನ ಹಿಂಬಾಲಕರೊಂದಿಗೆ ಹೊರಟುಹೋದನು. ಅವನು ಕೊನೆಯ ಮನೆಯ ಹತ್ತಿರ ನಿಂತುಕೊಂಡನು.


ಶ್ರೀಮಂತನ ಹತ್ತಿರ ಅನೇಕ ಕುರಿಗಳು ಮತ್ತು ದನಗಳು ಇದ್ದವು.


ನಾವು ನಮ್ಮನ್ನು ಆಳಲು ಅಬ್ಷಾಲೋಮನನ್ನು ಆರಿಸಿಕೊಂಡೆವು. ಆದರೆ ಅವನೀಗ ಯುದ್ಧದಲ್ಲಿ ಸತ್ತಿದ್ದಾನೆ. ದಾವೀದನನ್ನು ನಾವು ಮತ್ತೆ ರಾಜನನ್ನಾಗಿ ಮಾಡೋಣ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು