2 ಸಮುಯೇಲ 15:2 - ಪರಿಶುದ್ದ ಬೈಬಲ್2 ಅಬ್ಷಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗುತ್ತಿರುವುದನ್ನು ಅಬ್ಷಾಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ಷಾಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಆ ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿದವನು” ಎಂದು ಉತ್ತರಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಮುಂಜಾನೆಯೇ ಎದ್ದು ಊರುಬಾಗಿಲ ಬಳಿಯಲ್ಲಿ ನಿಂತುಕೊಳ್ಳುತ್ತಿದ್ದನು. ಯಾರಾದರೂ ತಮ್ಮ ವ್ಯಾಜ್ಯ ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು, “ನೀನು ಯಾವ ಊರಿನವನು?” ಎಂದು ವಿಚಾರಿಸುತ್ತಿದ್ದನು. ಅವರು, “ನಿನ್ನ ಸೇವಕರಾದ ನಾವು ಇಸ್ರಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಹೊತ್ತಾರೆಯಲ್ಲೆದ್ದು ಊರುಬಾಗಲ ಬಳಿಯಲ್ಲಿ ನಿಂತುಕೊಳ್ಳುವನು. ಯಾವನಾದರೂ ತನ್ನ ವ್ಯಾಜ್ಯತೀರಿಸಿಕೊಳ್ಳುವದಕ್ಕಾಗಿ ಅರಸನ ಬಳಿಗೆ ಹೋಗುವದನ್ನು ಅಬ್ಷಾಲೋಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು ನೀನು ಯಾವ ಊರಿನವನು ಎಂದು ಕೇಳುವನು. ಅವನು - ನಿನ್ನ ಸೇವಕನಾದ ನಾನು ಇಸ್ರಾಯೇಲ್ಯರ ಇಂಥ ಕುಲಕ್ಕೆ ಸೇರಿದವನು ಎಂದು ಉತ್ತರ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಿಲ ಬಳಿಯಲ್ಲಿ ನಿಂತುಕೊಂಡು, ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು, “ನೀನು ಯಾವ ಪಟ್ಟಣದವನು?” ಎಂದು ಕೇಳಿದನು. ಅದಕ್ಕವನು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರ ಕೊಡುವನು. ಅಧ್ಯಾಯವನ್ನು ನೋಡಿ |