2 ಸಮುಯೇಲ 15:21 - ಪರಿಶುದ್ದ ಬೈಬಲ್21 ಅದಕ್ಕೆ ಇತ್ತೈಯನು ರಾಜನಿಗೆ, “ಯೆಹೋವನಾಣೆ ಮತ್ತು ನಿನ್ನಾಣೆ, ನಾನಂತೂ ನಿನ್ನೊಂದಿಗೆ ಇರುತ್ತೇನೆ. ನನಗೆ ಜೀವ ಹೋದರೂ ಉಳಿದರೂ ನಿನ್ನೊಂದಿಗೆ ಇರುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದಕ್ಕೆ ಇತ್ತೈ, “ಸರ್ವೇಶ್ವರನಾಣೆ, ನನ್ನ ಒಡೆಯರಾದ ಅರಸರ ಜೀವದಾಣೆ, ಪ್ರಾಣಹೋದರೂ ಉಳಿದರೂ ನನ್ನ ಒಡೆಯರಾದ ಅರಸರಿರುವಲ್ಲಿಗೇ ಹೋಗುವೆನು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದಕ್ಕೆ ಇತ್ತೈ - ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಜೀವಹೋದರೂ ಉಳಿದರೂ ನನ್ನ ಒಡೆಯನಾದ ಅರಸನಿರುವಲ್ಲಿಗೆ ಹೋಗುವೆನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಇತ್ತೈಯೂ ಅರಸನಿಗೆ ಉತ್ತರವಾಗಿ, “ಯೆಹೋವ ದೇವರ ಜೀವದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ, ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ, ಸಾವಾದರೂ ಬದುಕಾದರೂ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು,” ಎಂದನು. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.