2 ಸಮುಯೇಲ 15:27 - ಪರಿಶುದ್ದ ಬೈಬಲ್27 ರಾಜನು ಯಾಜಕನಾದ ಚಾದೋಕನಿಗೆ, “ನೀನೊಬ್ಬ ದೇವದರ್ಶಿ. ಸಮಾಧಾನದಿಂದ ನಗರಕ್ಕೆ ಹಿಂದಿರುಗು. ನಿನ್ನ ಮಗನಾದ ಅಹೀಮಾಚನನ್ನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇದಲ್ಲದೆ ಅರಸನು ಯಾಜಕನಾದ ಚಾದೋಕನಿಗೆ, “ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇದಲ್ಲದೆ ಅವನು ಯಾಜಕನಾದ ಚಾದೋಕನಿಗೆ - ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು, ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ. ಅಧ್ಯಾಯವನ್ನು ನೋಡಿ |