Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:29 - ಪರಿಶುದ್ದ ಬೈಬಲ್‌

29 ಆದ್ದರಿಂದ ಚಾದೋಕನು ಮತ್ತು ಎಬ್ಯಾತಾರನು ದೇವರ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಜೆರುಸಲೇಮಿಗೆ ಹಿಂದಿರುಗಿ, ಅಲ್ಲಿಯೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಚಾದೋಕನು ಹಾಗು ಎಬ್ಯಾತಾರನು ದೇವರ ಮಂಜೂಷವನ್ನು ಜೆರುಸಲೇಮಿಗೆ ಕೊಂಡೊಯ್ದು ಅಲ್ಲೇ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇವಿುಗೆ ಒಯ್ದು ಅಲ್ಲೇ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಹಾಗೆಯೇ ಚಾದೋಕನೂ, ಅಬಿಯಾತರನೂ ದೇವರ ಮಂಜೂಷವನ್ನು ತಿರುಗಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:29
4 ತಿಳಿವುಗಳ ಹೋಲಿಕೆ  

ಜನರು ಮರಳುಗಾಡಿಗೆ ದಾಟಿಹೋಗುವ ಸ್ಥಳದಲ್ಲಿ ನಾನು ಕಾದಿರುತ್ತೇನೆ. ನಾನು ನಿನ್ನಿಂದ ವರ್ತಮಾನ ಬರುವವರೆಗೆ ಅಲ್ಲಿ ಕಾದಿರುತ್ತೇನೆ” ಎಂದನು.


ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.


ಈ ಸುದ್ದಿ ರಾಜನಿಗೆ ಮುಟ್ಟಿತು. ಆಗ ಅವನು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ಸಂದೇಶವನ್ನು ಕಳುಹಿಸಿದನು. ಅವನು ಹೇಳಿದ್ದೇನೆಂದರೆ, “ಯೆಹೂದದ ನಾಯಕರೊಂದಿಗೆ ಮಾತಾಡಿರಿ. ಅವರಿಗೆ, ‘ಅರಸನಾದ ನನ್ನನ್ನು ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವು ಕೊನೆಯವರಾದದ್ದೇಕೆ? ನೋಡಿ, ರಾಜನನ್ನು ಹಿಂದೆ ಕರೆತರಬೇಕೆಂದು ಇಸ್ರೇಲರೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ.


ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು