Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:30 - ಪರಿಶುದ್ದ ಬೈಬಲ್‌

30 ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:30
21 ತಿಳಿವುಗಳ ಹೋಲಿಕೆ  

ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು.


ರಾಜನು ತನ್ನ ಮುಖವನ್ನು ಮುಚ್ಚಿಕೊಂಡಿದ್ದನು. ರಾಜನು, “ನನ್ನ ಮಗನೇ, ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ” ಎಂದು ಗಟ್ಟಿಯಾಗಿ ಅಳುತ್ತಿದ್ದನು.


ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ.


ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”


ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.


ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)


ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು.


ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.


ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು


ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು.


ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಈ ಊರುಗಳು ಆಲಿವ್ ಮರಗಳ ಬೆಟ್ಟ ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ,


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


“ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.


ಆದ್ದರಿಂದ ಚಾದೋಕನು ಮತ್ತು ಎಬ್ಯಾತಾರನು ದೇವರ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಜೆರುಸಲೇಮಿಗೆ ಹಿಂದಿರುಗಿ, ಅಲ್ಲಿಯೇ ಉಳಿದುಕೊಂಡರು.


ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, “ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು