2 ಸಮುಯೇಲ 15:31 - ಪರಿಶುದ್ದ ಬೈಬಲ್31 ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು. ಅಧ್ಯಾಯವನ್ನು ನೋಡಿ |