2 ಸಮುಯೇಲ 15:34 - ಪರಿಶುದ್ದ ಬೈಬಲ್34 ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿ ಹೋದರೆ, ನೀನು ಅಹೀತೋಫೆಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಷಾಲೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು. ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ‘ಅರಸರೇ, ನಾನು ನಿಮ್ಮ ಸೇವಕನು; ಹಿಂದೆ ನಿಮ್ಮ ತಂದೆಗೆ ಸೇವೆಸಲ್ಲಿಸಿದಂತೆ ಈಗ ನಿಮ್ಮ ಸೇವೆಮಾಡುತ್ತೇನೆ,’ ಎಂದು ಹೇಳುವುದಾದರೆ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ನೀನು ನನಗೆ ಅನುಕೂಲ ಮಾಡಿಕೊಟ್ಟಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ - ಅರಸನೇ, ನಾನು ನಿನ್ನ ಸೇವಕನು; ಮುಂಚೆ ನಿನ್ನ ತಂದೆಯನ್ನು ಸೇವಿಸಿದಂತೆ ಈಗ ನಿನ್ನನ್ನು ಸೇವಿಸುತ್ತೇನೆ ಎಂದು ಹೇಳುವದಾದರೆ ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ನಿನಗೆ ಅನುಕೂಲವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನೀನು ಪಟ್ಟಣಕ್ಕೆ ತಿರುಗಿ ಹೋಗಿ ಅಬ್ಷಾಲೋಮನಿಗೆ, ‘ಅರಸನೇ, ನಾನು ನಿನ್ನ ಸೇವಕನಾಗಿರುವೆನು. ನಾನು ಇಂದಿನವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ, ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು,’ ಎಂದು ಹೇಳಿದರೆ, ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಬಹುದು. ಅಧ್ಯಾಯವನ್ನು ನೋಡಿ |