2 ಸಮುಯೇಲ 15:4 - ಪರಿಶುದ್ದ ಬೈಬಲ್4 ಅಲ್ಲದೆ ಅಬ್ಷಾಲೋಮನು, “ಯಾರಾದರೂ ನನ್ನನ್ನು ಈ ದೇಶದಲ್ಲಿ ನ್ಯಾಯಾಧೀಶನನ್ನಾಗಿ ಮಾಡಿದ್ದರೆ ಒಳ್ಳೆಯದಾಗುತ್ತಿತ್ತು. ತೀರ್ಪಿಗಾಗಿ ತಮ್ಮ ತೊಂದರೆಗಳೊಂದಿಗೆ ಬರುವ ಪ್ರತಿಯೊಬ್ಬನಿಗೂ ಆಗ ನಾನು ಸಹಾಯ ಮಾಡಬಹುದಾಗಿತ್ತು. ಅವನ ತೊಂದರೆಗೆ ತೃಪ್ತಿಕರವಾದ ಪರಿಹಾರವನ್ನು ನೀಡಲು ನಾನು ಸಹಾಯ ಮಾಡಬಹುದಾಗಿತ್ತು” ಎಂದು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ವ್ಯಾಜ್ಯವಾಗಲಿ ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ನಾಡಿನ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಸೂಚಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ವ್ಯಾಜ್ಯವಾಗಲಿ ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇವಿುಸಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಅಬ್ಷಾಲೋಮನು, “ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ನೇಮಕವಾಗಿದ್ದರೆ ಎಷ್ಟೋ ಒಳ್ಳೆಯದು. ಆಗ ವ್ಯಾಜ್ಯವಾದರೂ, ನ್ಯಾಯವಿಚಾರಣೆಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ, ನಾನು ಅವನಿಗೆ ನೀತಿಯಿಂದ ನ್ಯಾಯತೀರಿಸುವೆನು,” ಅನ್ನುವನು. ಅಧ್ಯಾಯವನ್ನು ನೋಡಿ |