Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:6 - ಪರಿಶುದ್ದ ಬೈಬಲ್‌

6 ರಾಜನಾದ ದಾವೀದನ ಬಳಿಗೆ ತೀರ್ಪಿಗಾಗಿ ಬರುವ ಎಲ್ಲಾ ಇಸ್ರೇಲರಿಗೆ ಅಬ್ಷಾಲೋಮನು ಇದೇ ರೀತಿ ಮಾಡುತ್ತಿದ್ದನು. ಹೀಗೆ, ಅಬ್ಷಾಲೋಮನು ಇಸ್ರೇಲಿನ ಜನರೆಲ್ಲರ ಹೃದಯಗಳನ್ನು ಗೆದ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸನ ಬಳಿಗೆ ನ್ಯಾಯನಿರ್ಣಯಕ್ಕಾಗಿ ಬರುತ್ತಿದ್ದ ಎಲ್ಲಾ ಇಸ್ರಯೇಲರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ಒಲಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲ್ಯರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲರೆಲ್ಲರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲರ ಹೃದಯಗಳನ್ನು ಗೆದ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:6
6 ತಿಳಿವುಗಳ ಹೋಲಿಕೆ  

ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಕೆಡುಕರು ತಮ್ಮ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾರೆ. ಸಜ್ಜನರಿಗಾದರೋ ಅವರ ತಿಳುವಳಿಕೆಯೇ ರಕ್ಷಣೆ ನೀಡುವುದು.


ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ಷಾಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು.


“ಆ ರಾಜನ ತರುವಾಯ ಅತಿ ಕ್ರೂರನೂ ದ್ವೇಷಮಯಿಯೂ ಆದ ಒಬ್ಬನು ರಾಜನಾಗುವನು. ಅವನು ರಾಜ ಮನೆತನದವನಾಗಿರುವದಿಲ್ಲ. ಅವನು ವಂಚನೆಯಿಂದ ರಾಜನಾಗಿರುತ್ತಾನೆ. ಜನರು ನೆಮ್ಮದಿಯಿಂದ ನಿರ್ಭಯರಾಗಿರುವಾಗ ಅವನು ರಾಜ್ಯದ ಮೇಲೆ ಧಾಳಿ ಮಾಡುತ್ತಾನೆ.


ಆದರೆ ನಾನು ಗಮನಿಸಿದ ಪ್ರಕಾರ ಜನರು ಆ ಯೌವನಸ್ಥನ ಪಕ್ಷವಹಿಸುವರು. ಅವನು ಹೊಸರಾಜನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು