Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:1 - ಪರಿಶುದ್ದ ಬೈಬಲ್‌

1 ದಾವೀದನು ಆಲೀವ್ ಬೆಟ್ಟದ ಮೇಲೆ ಸ್ವಲ್ಪ ದೂರ ಬಂದನು. ಅಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ದಾವೀದನನ್ನು ಸಂಧಿಸಿದನು. ಚೀಬನ ಹತ್ತಿರ ತಡಿಹಾಕಲ್ಪಟ್ಟ ಎರಡು ಹೇಸರಕತ್ತೆಗಳಿದ್ದವು. ಆ ಹೇಸರಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳು, ಒಂದುನೂರು ಗೊಂಚಲು ಒಣದ್ರಾಕ್ಷಿ, ಒಂದುನೂರು ಹಣ್ಣುಗಳು ಮತ್ತು ದ್ರಾಕ್ಷಾರಸದ ಒಂದು ಚೀಲ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ಗುಡ್ಡದ ತುದಿಯ ಆಚೆಗೆ ಹೋಗುವಷ್ಟರಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ಇನ್ನೂರು ರೊಟ್ಟಿಗಳನ್ನು, ನೂರು ಒಣಗಿದ ದ್ರಾಕ್ಷಿಗೊಂಚಲುಗಳನ್ನು, ನೂರು ಹಣ್ಣುಗಳನ್ನು ಹಾಗು ಒಂದು ಬುದ್ದಲಿ ದ್ರಾಕ್ಷಾರಸವನ್ನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿ ಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ ನೂರು ಒಣಗಿದ ದ್ರಾಕ್ಷೇ ಗೊಂಚಲುಗಳನ್ನೂ ನೂರು ಹಣ್ಣುಗಳನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರ ಹೋದಾಗ, ಮೆಫೀಬೋಶೆತನ ಸೇವಕ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡೆದುಕೊಂಡು ಬಂದು, ಅವನನ್ನು ಎದುರುಗೊಂಡನು. ಅವುಗಳ ಮೇಲೆ ಇನ್ನೂರು ರೊಟ್ಟಿಗಳೂ, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳೂ, ಬೇಸಿಗೆ ಕಾಲದ ನೂರು ಹಣ್ಣುಗಳೂ, ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:1
17 ತಿಳಿವುಗಳ ಹೋಲಿಕೆ  

ಅಬೀಗೈಲಳು ಇನ್ನೂರು ರೊಟ್ಟಿಗಳನ್ನೂ ಎರಡು ದ್ರಾಕ್ಷಾರಸದ ಚೀಲಗಳನ್ನೂ ಐದು ಕುರಿಗಳ ಬೇಯಿಸಿದ ಮಾಂಸವನ್ನೂ ಹದಿನೇಳು ಕಿಲೋಗ್ರಾಂ ಬೇಯಿಸಿದ ಕಾಳನ್ನೂ ನೂರುಗೊಂಚಲು ಒಣದ್ರಾಕ್ಷಿಯನ್ನೂ ಅಂಜೂರ ಹಣ್ಣಿನ ಇನ್ನೂರು ಉಂಡೆಗಳನ್ನೂ ತ್ವರಿತವಾಗಿ ತೆಗೆದುಕೊಂಡಳು. ಅವಳು ಅವುಗಳನ್ನು ಕತ್ತೆಗಳ ಮೇಲೆ ಹೇರಿದಳು.


ದಾವೀದನು ಬೆಟ್ಟದ ಮೇಲೆ ದೇವರನ್ನು ಆರಾಧಿಸಿದನು. ಆ ಸಮಯದಲ್ಲಿ ಅರ್ಕೀಯನಾದ ಹೂಷೈ ಎಂಬವನು ಅವನಲ್ಲಿಗೆ ಬಂದನು. ಹೂಷೈನ ಅಂಗಿಯು ಹರಿದಿತ್ತು. ಅವನ ತಲೆಯ ಮೇಲೆಲ್ಲಾ ಧೂಳಿತ್ತು.


ಯೆಹೋವನು ನನಗೆ ಇದನ್ನು ತೋರಿಸಿದನು: ನಾನು ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳನ್ನು ಕಂಡೆನು.


ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಫದಲ್ಲಿ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು.


ನಾನು ಸ್ವತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಆ ಕೆಲಸವನ್ನು ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”


ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು.


ಬರ್ಜಿಲ್ಲೈಯನು ಮುದುಕನಾಗಿದ್ದನು. ಅವನಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ದಾವೀದನು ಮಹನಯಿಮಿನಲ್ಲಿ ವಾಸಿಸುತ್ತಿದ್ದಾಗ ಅವನು ದಾವೀದನಿಗೆ ಆಹಾರವನ್ನೂ ಮತ್ತಿತರ ವಸ್ತುಗಳನ್ನೂ ಕೊಟ್ಟಿದ್ದನು; ಯಾಕೆಂದರೆ ಅವನು ಶ್ರೀಮಂತನಾಗಿದ್ದನು.


ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.


ಇಷಯನು ಕೆಲವು ರೊಟ್ಟಿಗಳನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಒಂದು ಹೋತಮರಿಯನ್ನೂ ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕೊಡುಗೆಗಳಾಗಿ ಕಳುಹಿಸಿದನು.


ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕ್ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಆ ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿ ಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ.


ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.


ಪ್ರಮುಖನನ್ನು ಭೇಟಿಯಾಗಬೇಕಿದ್ದರೆ, ಅವನಿಗೆ ಒಂದು ಉಡುಗೊರೆಯನ್ನು ಕೊಡು. ಆಗ ನೀನು ಅವನನ್ನು ಸುಲಭವಾಗಿ ಭೇಟಿಯಾಗಬಹುದು.


ಬೆನ್ಯಾಮೀನ್ ಕುಲದ ಒಂದು ಸಾವಿರ ಜನರು ಸಹ ಶಿಮ್ಮಿಯೊಂದಿಗೆ ಬಂದರು. ಸೌಲನ ಕುಲದಲ್ಲಿ ಸೇವಕನಾಗಿದ್ದ ಚೀಬನು ಸಹ ಬಂದನು. ಚೀಬನು ತನ್ನ ಹದಿನೈದು ಜನ ಮಕ್ಕಳನ್ನು ಮತ್ತು ಇಪ್ಪತ್ತು ಜನ ಸೇವಕರನ್ನು ತನ್ನೊಂದಿಗೆ ಕರೆತಂದನು. ಇವರೆಲ್ಲರೂ ರಾಜನಾದ ದಾವೀದನನ್ನು ಸಂಧಿಸಲು ಜೋರ್ಡನ್ ನದಿಯ ಹತ್ತಿರಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು