2 ಸಮುಯೇಲ 16:12 - ಪರಿಶುದ್ದ ಬೈಬಲ್12 ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೋ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು. ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು