Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:19 - ಪರಿಶುದ್ದ ಬೈಬಲ್‌

19 ಮುಂಚೆ ನಾನು ನಿನ್ನ ತಂದೆಯ ಸೇವೆ ಮಾಡಿದೆನು. ಈಗ ದಾವೀದನ ಮಗನ ಸೇವೆ ಮಾಡಬೇಕು. ನಾನು ನಿನ್ನ ಸೇವೆ ಮಾಡುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ, ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿಮ್ಮ ತಂದೆಯ ಸನ್ನಿಧಿಯಲ್ಲಿ ಸೇವೆಮಾಡಿದಂತೆ ನಿಮ್ಮ ಸನ್ನಿಧಿಯಲ್ಲಿ ಸೇವೆಮಾಡುವೆನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ನಾನು ಈಗ ಸೇವಿಸಬೇಕೆಂದಿರುವದು ರಾಜಪುತ್ರನ ಸನ್ನಿಧಿಯಲ್ಲಿಯಲ್ಲವೇ. ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವಿಸುವೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:19
7 ತಿಳಿವುಗಳ ಹೋಲಿಕೆ  

ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿ ಹೋದರೆ, ನೀನು ಅಹೀತೋಫೆಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಷಾಲೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು. ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು.


ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು; ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು. ಅವರ ಮಾತುಗಳು ಬೆಣ್ಣೆಯಂತೆ ನುಣುಪಾಗಿದ್ದರೂ ಅವರ ಹೃದಯಗಳು ಬಿಚ್ಚುಗತ್ತಿಗಳೇ ಸರಿ.


ಹೀಗೆ ಪೇತ್ರನು ಕಪಟತನದಿಂದ ವರ್ತಿಸಿದನು. ಯೆಹೂದ್ಯರಾದ ವಿಶ್ವಾಸಿಗಳು ಸಹ ಪೇತ್ರನನ್ನೇ ಅನುಸರಿಸಿ ಕಪಟತನದಿಂದ ವರ್ತಿಸಿದರು. ಇವರ ವರ್ತನೆಯಿಂದ ಬಾರ್ನಬನು ಸಹ ಪ್ರಭಾವಿತನಾದನು.


ದಾವೀದನು, “ನಾನು ಮಾಡಿರುವ ತಪ್ಪಾದರೂ ಏನು? ನಾನು ನಿನ್ನ ಹತ್ತಿರಕ್ಕೆ ಬಂದಾಗಿನಿಂದ ಈಗಿನವರೆಗೆ ನನ್ನಲ್ಲಿ ನೀನು ಗುರುತಿಸಿರುವ ದುಷ್ಟತನವಾದರೂ ಏನು? ರಾಜನಾದ ನನ್ನ ಒಡೆಯನ ಶತ್ರುಗಳ ವಿರುದ್ಧ ಹೋರಾಡಲು ನನ್ನನ್ನು ಬಿಡುವುದಿಲ್ಲವೇಕೆ?” ಎಂದು ಹೇಳಿದನು.


ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು.


ಹೂಷೈಯು, “ಯೆಹೋವನು ಆರಿಸಿಕೊಂಡ ವ್ಯಕ್ತಿಗೆ ನಾನು ಸೇರಿದವನು. ಈ ಜನರು ಮತ್ತು ಇಸ್ರೇಲಿನ ಜನರು ನಿನ್ನನ್ನು ಆರಿಸಿದ್ದಾರೆ. ನಾನು ನಿನ್ನೊಡನೆ ನೆಲೆಸುತ್ತೇನೆ.


ಅಬ್ಷಾಲೋಮನು, “ನಾವೇನು ಮಾಡಬೇಕೆಂಬುದನ್ನು ದಯವಿಟ್ಟು ನಮಗೆ ತಿಳಿಸು” ಎಂದು ಅಹೀತೋಫೆಲನನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು