2 ಸಮುಯೇಲ 16:2 - ಪರಿಶುದ್ದ ಬೈಬಲ್2 ರಾಜನಾದ ದಾವೀದನು ಚೀಬನಿಗೆ, “ಈ ವಸ್ತುಗಳೆಲ್ಲ ಏತಕ್ಕಾಗಿ?” ಎಂದು ಕೇಳಿದನು. ಚೀಬನು, “ಹೇಸರಕತ್ತೆಗಳನ್ನು ರಾಜನ ಕುಟುಂಬದವರು ಸವಾರಿ ಮಾಡುವುದಕ್ಕಾಗಿಯೂ ರೊಟ್ಟಿಗಳನ್ನು ಮತ್ತು ಹಣ್ಣುಗಳನ್ನು ಸೇವಕರು ತಿನ್ನುವುದಕ್ಕಾಗಿಯೂ ತಂದಿದ್ದೇನೆ. ಅರಣ್ಯದಲ್ಲಿ ಶಕ್ತಿಗುಂದಿಹೋದವನು ದ್ರಾಕ್ಷಾರಸವನ್ನು ಕುಡಿಯಲಿ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅರಸನು ಚೀಬನನ್ನು ನೋಡಿ, “ಇವುಗಳನ್ನು ಏಕೆ ತಂದೆ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಅರಸರ ಮನೆಯವರು ಸವಾರಿಮಾಡಲೆಂದು, ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನಲೆಂದೂ ಹಾಗು ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯಲೆಂದು ತಂದಿದ್ದೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅರಸನು ಚೀಬನನ್ನು - ಇವುಗಳನ್ನು ಯಾಕೆ ತಂದಿ ಎಂದು ಕೇಳಲು ಅವನು - ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವದಕ್ಕಾಗಿಯೂ ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನುವದಕ್ಕಾಗಿಯೂ ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕಾಗಿಯೂ ತಂದಿದ್ದೇನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅರಸನು ಚೀಬನಿಗೆ, “ಇವು ಏಕೆ,” ಎಂದನು. ಅದಕ್ಕೆ ಚೀಬನು, “ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವುದಕ್ಕೆ, ಆ ರೊಟ್ಟಿಗಳೂ, ಬೇಸಿಗೆ ಕಾಲದ ಫಲಗಳೂ ಜನರಿಗೆ ತಿನ್ನುವುದಕ್ಕೆ, ದ್ರಾಕ್ಷಾರಸವು ಮರುಭೂಮಿಯಲ್ಲಿ ದಣಿದವರು ಕುಡಿಯುವುದಕ್ಕೆ,” ಎಂದನು. ಅಧ್ಯಾಯವನ್ನು ನೋಡಿ |