21 ಅಹೀತೋಫೆಲನು ಅಬ್ಷಾಲೋಮನಿಗೆ, “ನಿಮ್ಮ ತಂದೆಯು, ಮನೆಯನ್ನು ಕಾಯುವುದಕ್ಕೆ ತನ್ನ ಕೆಲವು ಪತ್ನಿಯರನ್ನು ಇಲ್ಲಿ ಬಿಟ್ಟುಹೋಗಿದ್ದಾನೆ. ನೀನು ಅವರೊಂದಿಗೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ದ್ವೇಷಿಸುವನೆಂಬುದು ಇಸ್ರೇಲರಿಗೆಲ್ಲ ಆಗ ತಿಳಿಯುವುದು; ನಿನಗೆ ಮತ್ತಷ್ಟು ಬೆಂಬಲವನ್ನು ಕೊಡಲು ನಿನ್ನ ಜನರೆಲ್ಲರನ್ನು ಪ್ರೋತ್ಸಾಹಿಸಿದಂತಾಗುತ್ತದೆ” ಎಂದನು.
21 ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು.
21 ಅವನು, “ತಾವು ಹೋಗಿ ತಮ್ಮ ತಂದೆ ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗಮಿಸಿ. ಹೀಗೆ ಮಾಡುವುದಾದರೆ, ತಾವು ತಮ್ಮ ತಂದೆಗೆ ಅಸಹ್ಯವೈರಿಯಾದಿರೆಂದು ಎಲ್ಲ ಇಸ್ರಯೇಲರಿಗೆ ತಿಳಿಯುವುದು. ಆಗ ತಮ್ಮ ಪಕ್ಷದವರು ಹುಮ್ಮಸ್ಸುಗೊಳ್ಳುವರು,” ಎಂದು ಉತ್ತರಕೊಟ್ಟನು.
21 ಹೋಗಿ ನಿನ್ನ ತಂದೆಯು ಮನೆಕಾಯುವದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗವಿುಸು. ಹೀಗೆ ಮಾಡುವದಾದರೆ ನೀನು ನಿನ್ನ ತಂದೆಗೆ ಅಸಹ್ಯವಾದಿಯೆಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು ಎಂದು ಉತ್ತರ ಕೊಟ್ಟನು.
21 ಅಹೀತೋಫೆಲನು ಅಬ್ಷಾಲೋಮನಿಗೆ, “ಮನೆಗೆ ಕಾವಲಿಟ್ಟ ನಿನ್ನ ತಂದೆಯ ಉಪಪತ್ನಿಯರ ಸಂಗಡ ಮಲಗು; ಆಗ ನಿನ್ನ ತಂದೆ ನಿನ್ನನ್ನು ತನ್ನ ಶತ್ರುವನ್ನಾಗಿ ಮಾಡಿದನೆಂದು ಎಲ್ಲ ಇಸ್ರಾಯೇಲರಿಗೆ ತಿಳಿಯುವುದು. ಆಗ ನಿನ್ನ ಜನರ ಕೈಗಳೂ ಬಲವಾಗುವುವು,” ಎಂದನು.
ದಾವೀದನು ಜೆರುಸಲೇಮಿನ ತನ್ನ ಅರಮನೆಗೆ ಬಂದನು. ದಾವೀದನು ಮನೆಕಾಯಲು ಬಿಟ್ಟುಹೋದ ತನ್ನ ಹತ್ತುಮಂದಿ ಉಪಪತ್ನಿಯರನ್ನು ಒಂದು ಮನೆಯಲ್ಲಿ ಇಟ್ಟಿದ್ದನು. ಈ ಮನೆಯನ್ನು ಕಾವಲುಗಾರರು ಕಾಯುತ್ತಿದ್ದರು. ಈ ಹೆಂಗಸರು ತಾವು ಸಾಯುವವರೆಗೆ ಈ ಮನೆಯಲ್ಲಿಯೇ ನೆಲೆಸಿದ್ದರು. ದಾವೀದನು ಅವರಿಗೆ ಆಹಾರ ವಸ್ತ್ರಗಳನ್ನು ಕೊಟ್ಟನು. ಆದರೆ ಅವನು ಅವರೊಂದಿಗೆ ಮಲಗಿಕೊಳ್ಳಲಿಲ್ಲ. ಅವರು ಸಾಯುವವರೆಗೆ ವಿಧವೆಯರಂತಿದ್ದರು.
ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”
ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿಸಿದನು.
ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.
ರಾಜನಾದ ಸೊಲೊಮೋನನು ತನ್ನ ತಾಯಿಗೆ, “ಅಬೀಷಗಳನ್ನು ಅವನಿಗೆ ಕೊಡು ಎಂಬುದಾಗಿ ನೀನೇಕೆ ನನ್ನನ್ನು ಕೇಳುತ್ತಿರುವೆ? ಅವನು ನನ್ನ ಹಿರಿಯಣ್ಣನಾಗಿರುವುದರಿಂದ ಅವನನ್ನೇ ರಾಜನನ್ನಾಗಿ ಮಾಡೆಂದು ನೀನು ಕೇಳದಿರುವುದೇಕೆ? ಯಾಜಕನಾದ ಎಬ್ಯಾತಾರನೂ ಯೋವಾಬನೂ ಅವನಿಗೆ ಬೆಂಬಲವನ್ನು ನೀಡಿದರು!” ಎಂದು ಉತ್ತರಿಸಿದನು.
ಅದೋನೀಯನು, “ರಾಜನಾದ ಸೊಲೊಮೋನನು ನೀನು ಏನನ್ನು ಕೇಳಿದರೂ ಮಾಡುತ್ತಾನೆಂಬುದು ನನಗೆ ತಿಳಿದಿದೆ. ಆದ್ದರಿಂದ, ಶೂನೇಮಿನ ಅಬೀಷಗ್ ಎಂಬ ಸ್ತ್ರೀಯನ್ನು ನನಗೆ ಕೊಡುವಂತೆ ದಯಮಾಡಿ ನೀನು ಅವನನ್ನು ಕೇಳು. ನಾನು ಅವಳನ್ನು ಮದುವೆಯಾಗುತ್ತೇನೆ” ಎಂದು ಹೇಳಿದನು.
“ಯೆಹೋವನು ಹೇಳುವುದೇನೆಂದರೆ: ‘ನಾನು ನಿನಗೆ ತೊಂದರೆಯನ್ನುಂಟುಮಾಡುತ್ತೇನೆ. ನಿನ್ನ ಸ್ವಂತ ಕುಟುಂಬದಿಂದಲೇ ಈ ತೊಂದರೆಯು ಬರುತ್ತದೆ. ನಾನು ನಿನ್ನ ಪತ್ನಿಯರನ್ನು ತೆಗೆದುಕೊಂಡು ನಿನಗೆ ತೀರ ಹತ್ತಿರನಾಗಿರುವ ಒಬ್ಬ ವ್ಯಕ್ತಿಗೆ ಕೊಡುತ್ತೇನೆ. ಅವನು ನಿನ್ನ ಪತ್ನಿಯರ ಜೊತೆಯಲ್ಲಿ ಮಲಗುತ್ತಾನೆ. ಇದು ಎಲ್ಲರಿಗೂ ತಿಳಿಯುತ್ತದೆ.
ಆಕೀಷನು ದಾವೀದನಲ್ಲಿ ಭರವಸೆ ಇಡತೊಡಗಿದನು. ಆಕೀಷನು ತನ್ನೊಳಗೆ, “ಈಗ ದಾವೀದನ ಸ್ವಂತ ಜನರೇ ಅವನನ್ನು ದ್ವೇಷಿಸುವರು. ಇಸ್ರೇಲರು ದಾವೀದನನ್ನು ಬಹಳವಾಗಿ ದ್ವೇಷಿಸುತ್ತಾರೆ. ಈಗ ದಾವೀದನು ಶಾಶ್ವತವಾಗಿ ನನ್ನ ಸೇವೆಮಾಡುವನು” ಎಂದುಕೊಂಡನು.
ಇಸ್ರೇಲರೆಲ್ಲರೂ ಈ ಸುದ್ದಿಯನ್ನು ಕೇಳಿ, “ಸೌಲನು ಫಿಲಿಷ್ಟಿಯರ ನಾಯಕನನ್ನು ಕೊಂದನು. ಈಗ ಫಿಲಿಷ್ಟಿಯರು ಇಸ್ರೇಲರನ್ನು ನಿಜವಾಗಿಯೂ ದ್ವೇಷಿಸುತ್ತಾರೆ” ಎಂದು ಹೇಳಿದರು. ಇಸ್ರೇಲರೆಲ್ಲ ಗಿಲ್ಗಾಲಿನಲ್ಲಿ ಸೌಲನನ್ನು ಜೊತೆಸೇರಲು ಕರೆಹೋಯಿತು.
ಒಬ್ಬನು ತನ್ನ ತಂದೆಯ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವನಿಗೂ ಆಕೆಗೂ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆಗೆ ಅವಮಾನ ಮಾಡಿದ್ದಾನೆ. ಅವರು ತಮ್ಮ ಮರಣಕ್ಕೆ ತಾವೇ ಜವಾಬ್ದಾರರಾಗಿದ್ದಾರೆ.
ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.) ಅವಳು “ನೀನು ನನಗೆ ಏನು ಕೊಡುವೆ?” ಎಂದು ಕೇಳಿದಳು.
ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.
ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.
ಅಮ್ಮೋನಿಯರು ತಾವು ದಾವೀದನಿಗೆ ಶತ್ರುಗಳಾಗಿರುವುದಾಗಿ ತಿಳಿದುಕೊಂಡರು. ಆದ್ದರಿಂದ ಅಮ್ಮೋನಿಯರು ಹಣಕೊಟ್ಟು ಬೇತ್‌ರೆಹೋಬ್ ಮತ್ತು ಚೋಬಾಗಳಿಂದ ಅರಾಮ್ಯರ ಇಪ್ಪತ್ತುಸಾವಿರ ಮಂದಿ ಭೂದಳವನ್ನು ಬರಮಾಡಿಕೊಂಡರು. ಅಮ್ಮೋನಿಯರು ಮಾಕಾದ ರಾಜನನ್ನು ಮತ್ತು ಅವನ ಒಂದು ಸಾವಿರ ಸೈನಿಕರನ್ನು ಹಾಗೂ ಟೋಬ್‌ನಿಂದ ಹನ್ನೆರಡು ಸಾವಿರ ಮಂದಿ ಸೈನಿಕರನ್ನು ಬರಮಾಡಿಕೊಂಡರು.
ಯೋನಾದಾಬನು ಅಮ್ನೋನನಿಗೆ, “ನೀನು ಹೋಗಿ ಹಾಸಿಗೆಯಲ್ಲಿ ಮಲಗಿಕೋ. ನೀನು ಕಾಯಿಲೆಯವನಂತೆ ನಟಿಸು. ಆಗ ನಿನ್ನನ್ನು ನೋಡಲು ನಿನ್ನ ತಂದೆಯು ಬರುತ್ತಾನೆ. ಆಗ ನೀನು ಅವನಿಗೆ, ‘ದಯವಿಟ್ಟು ನನ್ನ ಸೋದರಿಯಾದ ತಾಮಾರಳು ಇಲ್ಲಿಗೆ ಬಂದು, ನನಗೆ ಊಟವನ್ನು ಕೊಡಲಿ. ಅವಳು ನನ್ನ ಎದುರಿನಲ್ಲೇ ಅಡಿಗೆಯನ್ನು ಮಾಡಲಿ. ನಾನು ಅದನ್ನು ಕಣ್ಣಾರೆ ಕಂಡು ಅವಳ ಕೈಗಳಿಂದ ಊಟಮಾಡುತ್ತೇನೆ’ ಎಂದು ಹೇಳು” ಎಂಬುದಾಗಿ ಹೇಳಿಕೊಟ್ಟನು.
ರೆಜೋನನು ಅರಾಮನ್ನು ಆಳಿದನು. ರೆಜೋನನು ಇಸ್ರೇಲಿನ ದ್ವೇಷಿಯಾದ್ದರಿಂದ, ಸೊಲೊಮೋನನ ಜೀವಮಾನದಲ್ಲೆಲ್ಲಾ ಅವನು ಇಸ್ರೇಲಿನ ಶತ್ರುವಾಗಿಯೇ ಮುಂದುವರಿದನು. ರೆಜೋನ್ ಮತ್ತು ಹದದನು ಇಸ್ರೇಲಿಗೆ ಹೆಚ್ಚು ತೊಂದರೆಯನ್ನು ಉಂಟುಮಾಡಿದರು.