2 ಸಮುಯೇಲ 16:23 - ಪರಿಶುದ್ದ ಬೈಬಲ್23 ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ಷಾಲೋಮನಿಗೆ ಅಹೀತೋಫೆಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗೆಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟು ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ದಿವಸಗಳಲ್ಲಿ ಅಹೀತೋಫೆಲನು ತಿಳಿಸಿದ ಆಲೋಚನೆಯು ದೇವರನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಗಳನ್ನು ದಾವೀದನೂ, ಅಬ್ಷಾಲೋಮನೂ ಹಾಗೆಯೇ ಗೌರವಿಸುತ್ತಿದ್ದರು. ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.