Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:6 - ಪರಿಶುದ್ದ ಬೈಬಲ್‌

6 ದಾವೀದನ ಮತ್ತು ಅವನ ಸೇವಕರ ಮೇಲೆ ಶಿಮ್ಮಿಯು ಕಲ್ಲುಗಳನ್ನು ಎಸೆಯಲಾರಂಭಿಸಿದನು. ಆದರೆ ದಾವೀದನ ಸುತ್ತಲೂ ಜನರು ಮತ್ತು ಸೇವಕರು ಒಟ್ಟುಗೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು ದಾವೀದನ, ಅವನ ಎಲ್ಲ ಸೇವಕರ, ಎಡಬಲದಲ್ಲಿದ್ದ ಸೈನಿಕರ ಹಾಗು ಶೂರರ ಕಡೆಗೆ ಕಲ್ಲೆಸೆಯ ತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ದಾವೀದನಿಗೂ ಅವನ ಎಲ್ಲಾ ಸೇವಕರಿಗೂ ಎಡಬಲದಲ್ಲಿರುವ ಸೈನಿಕರಿಗೂ ಶೂರರಿಗೂ ಕಲ್ಲೆಸೆಯ ತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದಾವೀದನ ಎಡಬಲದಲ್ಲಿ ಸೈನಿಕರೂ, ವಿಶೇಷ ಕಾವಲುಗಾರರೂ ಇದ್ದರು. ಆದರೂ ಶಿಮ್ಮಿಯು ದಾವೀದನ ಮೇಲೆಯೂ, ಅವನ ಅಧಿಕಾರಿಗಳ ಮೇಲೆಯೂ ಕಲ್ಲುಗಳನ್ನು ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:6
3 ತಿಳಿವುಗಳ ಹೋಲಿಕೆ  

ದಾವೀದನು ಬಹುರೀಮಿಗೆ ಬಂದನು. ಸೌಲನ ಕುಟುಂಬಕ್ಕೆ ಸೇರಿದ ಗೇರನ ಮಗನಾದ ಶಿಮ್ಮಿಯು ದಾವೀದನನ್ನು ಶಪಿಸುತ್ತಾ ಬಹುರೀಮಿನಿಂದ ಹೊರಗೆ ಬಂದನು.


ಶಿಮ್ಮಿಯು ದಾವೀದನನ್ನು ಶಪಿಸುತ್ತಾ “ತೊಲಗಿಹೋಗು! ನೀನು ಕೊಲೆಗಾರ! ನೀನು ದುಷ್ಟ!


ಶಿಮ್ಮಿಯು ರಾಜನಿಗೆ, “ನನ್ನ ಒಡಯನೇ, ನಾನು ಮಾಡಿದ ಕೆಟ್ಟಕಾರ್ಯಗಳನ್ನು ಲಕ್ಷ್ಯಕ್ಕೆ ತಂದುಕೊಳ್ಳದಿರು. ನನ್ನ ರಾಜನಾದ ಒಡೆಯನೇ, ನೀನು ಜೆರುಸಲೇಮನ್ನು ಬಿಟ್ಟುಹೋದಾಗ ನಾನು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿಗೆ ತಂದುಕೊಳ್ಳಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು