Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:8 - ಪರಿಶುದ್ದ ಬೈಬಲ್‌

8 ಯೆಹೋವನು ನಿನ್ನನ್ನು ದಂಡಿಸುತ್ತಿದ್ದಾನೆ. ಏಕೆಂದರೆ ನೀನು ಸೌಲನ ಕುಟುಂಬದವರನ್ನು ಕೊಂದು ಸೌಲನ ರಾಜಪದವಿಯನ್ನು ಕದ್ದಿರುವೆ. ಈಗ ನಿನಗೂ ಅದೇ ಸಂಭವಿಸುತ್ತಿದೆ. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಮಗನಿಗೆ ಕೊಟ್ಟಿದ್ದಾನೆ. ಏಕೆಂದರೆ ನೀನೊಬ್ಬ ಕೊಲೆಗಾರ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಸಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ; ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರುಗಿ ಬರಮಾಡಿ, ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ನೀನು ಕೊಲೆಗಾರನಾದುದರಿಂದ, ನಿನ್ನ ಕೇಡಿನಲ್ಲಿ ನೀನು ಸಿಕ್ಕಿಕೊಂಡೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:8
18 ತಿಳಿವುಗಳ ಹೋಲಿಕೆ  

ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?


ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.


ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)


ಆದರೆ ಚೆರೂಯಳ ಮಗನಾದ ಅಬೀಷೈಯನು, “ಯೆಹೋವನಿಂದ ಆರಿಸಲ್ಪಟ್ಟ ರಾಜನಿಗೆ ಕೆಟ್ಟದ್ದು ಸಂಭವಿಸಲಿ ಎಂದು ಶಿಮ್ಮಿಯು ಅಪೇಕ್ಷಿಸಿದ್ದರಿಂದ ಮರಣ ಶಿಕ್ಷೆಗೆ ಗುರಿಯಾಗಲೇಬೇಕು” ಎಂದು ಹೇಳಿದನು.


ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.


ನನ್ನ ವೈರಿಗಳು ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದರು. ಆ ದುಷ್ಟರು ನನ್ನ ಮೇಲೆ ಅಬ್ಬರಿಸಿದರು. ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು.


ಶಿಮ್ಮಿಯು ರಾಜನಿಗೆ, “ನನ್ನ ಒಡಯನೇ, ನಾನು ಮಾಡಿದ ಕೆಟ್ಟಕಾರ್ಯಗಳನ್ನು ಲಕ್ಷ್ಯಕ್ಕೆ ತಂದುಕೊಳ್ಳದಿರು. ನನ್ನ ರಾಜನಾದ ಒಡೆಯನೇ, ನೀನು ಜೆರುಸಲೇಮನ್ನು ಬಿಟ್ಟುಹೋದಾಗ ನಾನು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿಗೆ ತಂದುಕೊಳ್ಳಬೇಡ.


“ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು.


ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ,


ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು