Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:10 - ಪರಿಶುದ್ದ ಬೈಬಲ್‌

10 ಆಗ ಸಿಂಹದಂತೆ ಶೂರರಾದ ಜನರು ಸಹ ಹೆದರಿಕೊಳ್ಳುತ್ತಾರೆ. ಏಕೆಂದರೆ ನಿನ್ನ ತಂದೆಯು ರಣವೀರನೆಂದು ಮತ್ತು ಅವನ ಜನರು ಧೈರ್ಯಶಾಲಿಗಳೆಂದು ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸಿಂಹಹೃದಯಿಗಳಾದ ಶೂರರ ಎದೆಯೂ ಕರಗಿ ನೀರಾಗುವುದು. ನಿಮ್ಮ ತಂದೆ ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಯೇಲರು ಬಲ್ಲರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಸಿಂಹಹೃದಯರಾದ ಶೂರರ ಎದೆಯೂ ಕರಗಿ ನೀರಾಗುವದು. ನಿನ್ನ ತಂದೆಯು ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲ್ಯರು ಬಲ್ಲರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸಿಂಹ ಹೃದಯರಾದ ಪರಾಕ್ರಮಶಾಲಿಯ ಹೃದಯವು ಸಹ ಸಂಪೂರ್ಣ ಕರಗುವುದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ, ಅವನ ಸಂಗಡ ಇರುವವರು ಪರಾಕ್ರಮಶಾಲಿಗಳೆಂದೂ ಇಸ್ರಾಯೇಲರೆಲ್ಲರು ಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:10
17 ತಿಳಿವುಗಳ ಹೋಲಿಕೆ  

ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಭಯದಿಂದ ಬಲಹೀನರಾಗುವರು.


ನೋಡಿ, ಅದು ಸೊಲೊಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು!


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು.


“ಸೌಲನು ಮತ್ತು ಯೋನಾತಾನನು ಒಬ್ಬರನ್ನೊಬ್ಬರು ಪ್ರೀತಿಸಿದರು; ತಮ್ಮ ಪರಸ್ಪರ ಜೀವಿತದಲ್ಲಿ ಆನಂದಿಸಿದರು. ಸೌಲನು ಮತ್ತು ಯೋನಾತಾನನು ಮರಣದಲ್ಲೂ ಒಂದಾದರು. ಅವರು ಹದ್ದುಗಳಿಗಿಂತ ವೇಗವಾಗಿ ಹೋದರು; ಸಿಂಹಗಳಿಗಿಂತ ಶಕ್ತಿಶಾಲಿಗಳಾಗಿದ್ದರು.


ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.


ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.


ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.


ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ. ಮಗನೇ, ನೀನು ಸಿಂಹದಂತೆ ಬೇಟೆಗಾಗಿ ಹೊಂಚುಹಾಕಿ ನಿಂತಿರುವೆ. ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ.


ಈಗಾಗಲೇ ಅವನು ಒಂದು ಗವಿಯಲ್ಲಾಗಲಿ ಇಲ್ಲವೆ ಬೇರೆ ಯಾವ ಸ್ಥಳದಲ್ಲಾಗಲಿ ಅಡಗಿಕೊಂಡಿರಬಹುದು. ನಿನ್ನ ತಂದೆಯು ನಿನ್ನ ಜನರ ಮೇಲೆ ಆಕ್ರಮಣ ಮಾಡಿದರೆ, ಆಗ ಜನರಿಗೆ ಸುದ್ದಿಯು ತಿಳಿಯುತ್ತದೆ. ‘ಅಬ್ಷಾಲೋಮನ ಹಿಂಬಾಲಕರು ಸೋಲುತ್ತಿದ್ದಾರೆ’ ಎಂದು ಅವರು ಯೋಚಿಸುತ್ತಾರೆ.


ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.


ಅವರ ಹೃದಯಗಳು ಭಯದಿಂದ ಕರಗಿಹೋಗುವುದು. ಬಹು ಜನರು ಪ್ರಜ್ಞೆ ತಪ್ಪಿ ಬೀಳುವರು. ನಗರದ್ವಾರದ ಬಳಿಯಲ್ಲಿದ್ದು ಈ ಖಡ್ಗವು ಬಹು ಜನರನ್ನು ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನ್ನು ಕೊಲ್ಲುವುದಕ್ಕಾಗಿ ಅದು ಹೊಳಪುಮಾಡಲ್ಪಟ್ಟಿದೆ.


ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು