2 ಸಮುಯೇಲ 17:12 - ಪರಿಶುದ್ದ ಬೈಬಲ್12 ದಾವೀದನನ್ನು ಅವನು ಅಡಗಿಕೊಂಡಿರುವ ಸ್ಥಳದಲ್ಲಿಯೇ ನಾವು ಹಿಡಿದುಕೊಳ್ಳುತ್ತೇವೆ. ಮಂಜಿನ ಹನಿಗಳು ಭೂಮಿಯ ಮೇಲೆ ಬೀಳುವಂತೆ ನಾವು ದಾವೀದನ ಮೇಲೆ ಬೀಳುವೆವು. ದಾವೀದನನ್ನು ಮತ್ತು ಅವನ ಜನರೆಲ್ಲರನ್ನು ನಾವು ಕೊಲ್ಲುವೆವು. ಯಾರನ್ನೂ ಜೀವಸಹಿತ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ನೆಲದ ಮೇಲೆ ಇಬ್ಬನಿ ಹೇಗೋ ಹಾಗೆಯೇ ಅವರ ಮೇಲೆ ಎರಗೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ಇಬ್ಬನಿಯು ನೆಲದ ಮೇಲೆ ಹೇಗೋ ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ನಾವು ಅವನನ್ನು ಕಂಡುಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು, ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ, ಅವನ ಸಂಗಡ ಇರುವ ಸಮಸ್ತ ಜನರಲ್ಲಿ ಒಬ್ಬನಾದರೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿ |
ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”