Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:14 - ಪರಿಶುದ್ದ ಬೈಬಲ್‌

14 ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:14
25 ತಿಳಿವುಗಳ ಹೋಲಿಕೆ  

ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿ ಹೋದರೆ, ನೀನು ಅಹೀತೋಫೆಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಷಾಲೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು. ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು.


ಯುದ್ಧ ಮಾಡಲು ಯೋಜನೆ ಹಾಕಿರಿ. ಆದರೆ ನಿಮ್ಮ ಯೋಜನೆಯೆಲ್ಲಾ ನಿಷ್ಫಲವಾಗುವುದು. ನಿಮ್ಮ ಸೈನ್ಯಕ್ಕೆ ಆಜ್ಞೆಕೊಡಿರಿ. ಆದರೆ ಅದು ನಿಷ್ಪ್ರಯೋಜಕವಾಗುವುದು. ಯಾಕೆಂದರೆ ದೇವರು ನಮ್ಮೊಂದಿಗಿದ್ದಾನೆ!


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.


ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.


ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.


“ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.


ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.


ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ಷಾಲೋಮನಿಗೆ ಅಹೀತೋಫೆಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗೆಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


ಅಮಚ್ಯನು ಅವನ ಮಾತಿಗೆ ಲಕ್ಷ್ಯಕೊಡಲಿಲ್ಲ. ಇದು ದೇವರಿಂದಲೇ ಆಯಿತು. ಇಸ್ರೇಲ್ ಯೆಹೂದವನ್ನು ಸೋಲಿಸಬೇಕೆಂದು ದೇವರ ಇಚ್ಛೆಯಾಗಿತ್ತು. ಯಾಕೆಂದರೆ ಯೆಹೂದದ ಜನರು ಎದೋಮ್ಯರ ದೇವರುಗಳನ್ನು ಆರಾಧಿಸುತ್ತಿದ್ದರು.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ಆದರೆ ರೆಹಬ್ಬಾಮನು ಹಿರಿಯರ ಸಲಹೆಯನ್ನು ಕೇಳಲಿಲ್ಲ. ಅವನೊಂದಿಗೆ ಬೆಳೆದ ಅವನ ಸಮಪ್ರಾಯದ ಯೌವನಸ್ಥರನ್ನು ವಿಚಾರಿಸಿ,


ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ವೈರಿಗಳಿಗೆ ತಿಳಿದಾಗ ದೇವರೇ ಅವರ ಯೋಜನೆಯನ್ನು ನಿಷ್ಫಲಮಾಡಿದನೆಂದು ಅವರು ತಿಳಿದರು. ಮತ್ತೆ ನಾವೆಲ್ಲಾ ಕಟ್ಟುವ ಕೆಲಸಕ್ಕೆ ಕೈಹಾಕಿದೆವು. ಅವರವರ ಭಾಗಕ್ಕೆ ಜನರು ತೆರಳಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು.


ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.


ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.


ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.


ದೇವರು ಮಂತ್ರಿಗಳ ಜ್ಞಾನವನ್ನು ತೆಗೆದುಹಾಕುವನು. ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು