Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:16 - ಪರಿಶುದ್ದ ಬೈಬಲ್‌

16 ಹೂಷೈಯು ಅವರಿಗೆ, ನೀವು ದಾವೀದನಿಗೆ ಹೀಗೆ ಹೇಳಿರಿ: “ಈ ರಾತ್ರಿ ನದಿಯನ್ನು ದಾಟುವ ಅಡವಿಯಲ್ಲಿ ತಂಗಬೇಡ, ಆದಷ್ಟು ಬೇಗನೆ ನದಿಯನ್ನು ದಾಟಿ ಆಚೆ ಹೋದರೆ ಒಳ್ಳೆಯದು. ಇಲ್ಲವಾದರೆ ನೀನು ನಿನ್ನ ಜನರೊಂದಿಗೆ ನಾಶವಾಗುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಿ; ಇಲ್ಲವಾದರೆ ನೀವೂ ನಿಮ್ಮ ಜನರೂ ನಾಶವಾಗುವಿರಿ’ ಎಂದು ಹೇಳಿ ಕಳುಹಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ - ನೀನು ಈ ರಾತ್ರಿ ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇಳುಕೊಳ್ಳಬೇಡ; ಶೀಘ್ರವಾಗಿ ಹೊಳೆದಾಟಿ ಮುಂದೆ ಹೋಗಿಬಿಡು; ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ ಎಂದು ಹೇಳಿಕಳುಹಿಸಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಬೇಡಿ; ಇಲ್ಲವಾದರೆ ನೀವೂ, ನಿಮ್ಮ ಜನರೂ ನಾಶವಾಗುವಿರಿ,’ ಎಂದು ಹೇಳಿ ಕಳುಹಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:16
14 ತಿಳಿವುಗಳ ಹೋಲಿಕೆ  

ಜನರು ಮರಳುಗಾಡಿಗೆ ದಾಟಿಹೋಗುವ ಸ್ಥಳದಲ್ಲಿ ನಾನು ಕಾದಿರುತ್ತೇನೆ. ನಾನು ನಿನ್ನಿಂದ ವರ್ತಮಾನ ಬರುವವರೆಗೆ ಅಲ್ಲಿ ಕಾದಿರುತ್ತೇನೆ” ಎಂದನು.


ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು.


ಅಳಿದುಹೋಗುವ ಈ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಈ ಮಾತುಗಳು ನೆರವೇರುತ್ತವೆ: “ಮರಣವು ಜಯದಲ್ಲಿ ನುಂಗಿಯೇಹೋಯಿತು.”


ಆತನು ಪರಲೋಕದಿಂದ ನನಗೆ ಸಹಾಯಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು.


ನನ್ನ ವೈರಿಗಳು ಸತತವಾಗಿ ನನ್ನ ಮೇಲೆ ಆಕ್ರಮಣ ಮಾಡುವರು. ಅವರಲ್ಲಿರುವ ಹೋರಾಟಗಾರರು ಅಸಂಖ್ಯಾತ.


ನಾನು ಓಡಿಹೋಗಿ ಹಾನಿಕರವಾದ ಈ ಬಿರುಗಾಳಿಯಿಂದ ತಪ್ಪಿಸಿಕೊಳ್ಳುತ್ತಿದ್ದೆನು.


ಅವರು, “ಆಹಾ! ನಾವು ಬಯಸಿದ್ದನ್ನೇ ಪಡೆದೆವು!” ಎಂದು ಹೇಳಲು ಅವಕಾಶಕೊಡಬೇಡ. “ನಾವು ಅವನನ್ನು ನಾಶಮಾಡಿದೆವು!” ಎಂದು ಹೇಳಲು ಅವರಿಗೆ ಆಸ್ಪದ ಕೊಡಬೇಡ.


ಆಗ ದಾವೀದನು ಜೆರುಸಲೇಮಿನಲ್ಲಿ ತನ್ನೊಂದಿಗಿದ್ದ ತನ್ನ ಸೇವಕರಿಗೆಲ್ಲ, “ನಾವು ತಪ್ಪಿಸಿಕೊಳ್ಳಲೇಬೇಕು! ನಾವು ತಪ್ಪಿಸಿಕೊಳ್ಳದಿದ್ದರೆ ಅಬ್ಷಾಲೋಮನು ನಮ್ಮನ್ನು ಹೋಗಗೊಡಿಸುವುದಿಲ್ಲ. ಅಬ್ಷಾಲೋಮನು ನಮ್ಮನ್ನು ಹಿಡಿಯುವುದಕ್ಕಿಂತ ಮೊದಲೇ ಇಲ್ಲಿಂದ ಹೋಗಿಬಿಡೋಣ. ಅವನು ನಮ್ಮೆಲ್ಲರನ್ನೂ ನಾಶಮಾಡುತ್ತಾನೆ; ಅವನು ಜೆರುಸಲೇಮಿನ ಜನರನ್ನು ಕೊಂದುಹಾಕುತ್ತಾನೆ” ಎಂದು ಹೇಳಿದನು.


ನಂತರ ಯೋನಾತಾನನು, “ಬೇಗ ಹೋಗು! ಅವುಗಳನ್ನು ತೆಗೆದುಕೊಂಡು ಬಾ! ಅಲ್ಲಿಯೇ ನಿಲ್ಲಬೇಡ!” ಎಂದು ಕೂಗಿಹೇಳಿದನು. ಆ ಬಾಲಕನು ಬಾಣಗಳನ್ನೆಲ್ಲ ಆರಿಸಿಕೊಂಡು ತನ್ನ ಒಡೆಯನ ಬಳಿಗೆ ತಂದನು.


ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರು ನಿನ್ನೊಂದಿಗೆ ಇರುತ್ತಾರೆ. ರಾಜನ ಮನೆಯಲ್ಲಿ ಕೇಳಿಸಿಕೊಂಡಿದ್ದನ್ನೆಲ್ಲ ಅವರಿಗೆ ನೀನು ತಿಳಿಸಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು