Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:2 - ಪರಿಶುದ್ದ ಬೈಬಲ್‌

2 ಅವನು ಆಯಾಸದಿಂದ ಬಲಹೀನನಾದಾಗ ಅವನ ಮೇಲೆ ದಾಳಿಮಾಡಿ ಹೆದರಿಸುವೆನು; ಆಗ ಅವನ ಜನರೆಲ್ಲರೂ ಓಡಿಹೋಗುತ್ತಾರೆ. ಆದರೆ ನಾನು ರಾಜನಾದ ದಾವೀದನನ್ನು ಮಾತ್ರ ಕೊಲ್ಲುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು; ಅವನ ಜನರೆಲ್ಲರೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ದಣಿದು ಅವನ ಕೈ ದುರ್ಬಲವಾಗಿರುವಾಗ, ಹೋಗಿ ಅವನ ಮೇಲೆ ಬಿದ್ದು ಅವನನ್ನು ಹೆದರಿಸುವೆನು. ಆಗ ಅವನ ಸಂಗಡ ಇರುವ ಜನರೆಲ್ಲರು ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:2
10 ತಿಳಿವುಗಳ ಹೋಲಿಕೆ  

ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;


ರಾಜನಾದ ದಾವೀದನು ಮತ್ತು ಅವನ ಜನರೆಲ್ಲರೂ ಬಹುರೀಮಿಗೆ ಬಂದರು. ರಾಜನು ಮತ್ತು ಅವನ ಜನರು ಆಯಾಸಗೊಂಡಿದ್ದರಿಂದ ಅವರು ಬಹುರೀಮಿನಲ್ಲಿ ವಿಶ್ರಾಂತಿ ಪಡೆದರು.


ಇಡೀ ಜನಾಂಗವು ನಾಶವಾಗುವುದಕ್ಕಿಂತ ಒಬ್ಬನು ಅವರಿಗೋಸ್ಕರವಾಗಿ ಸಾಯುವುದು ಉತ್ತಮ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದನು.


ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


“ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ಈ ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ಈ ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಅಮಾಲೇಕ್ಯರು ದೇವರನ್ನು ಗೌರವಿಸಲಿಲ್ಲ. ನೀವು ಆಯಾಸಗೊಂಡು ಬಲಹೀನರಾಗಿದ್ದಾಗ ಅವರು ನಿಮ್ಮ ಮೇಲೆ ಬಿದ್ದರು. ನಿಮ್ಮ ಗುಂಪಿನಲ್ಲಿ ಹಿಂದೆ ಉಳಿದವರನ್ನೆಲ್ಲಾ ಕೊಂದರು.


ಅಹೀತೋಫೆಲನು, “ಈಗ ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಅಟ್ಟಿಸಿಕೊಂಡು ಹೋಗುತ್ತೇನೆ.


ಅವರು ನಿನ್ನ ದೃಷ್ಟಿಯಲ್ಲಿ ಮಾಡಿದ ಪಾಪಗಳನ್ನು ಮನ್ನಿಸಬೇಡ. ಅವರು ಗೋಡೆಯನ್ನು ಕಟ್ಟುವ ನಿನ್ನ ದಾಸರನ್ನು ನಿಂದಿಸಿ ಅವರನ್ನು ನಿರುತ್ಸಾಹಗೊಳಿಸಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು