Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:23 - ಪರಿಶುದ್ದ ಬೈಬಲ್‌

23 ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:23
15 ತಿಳಿವುಗಳ ಹೋಲಿಕೆ  

ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.


ಆ ಸಮಯದಲ್ಲಿ ಹಿಜ್ಕೀಯನಿಗೆ ಕಾಯಿಲೆಯಾಗಿ ಸತ್ತಂತಾದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಹಿಜ್ಕೀಯನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ. ‘ನಿನ್ನ ಮನೆಯನ್ನು ವ್ಯವಸ್ಥೆಗೊಳಿಸು; ಏಕೆಂದರೆ ನೀನು ಸಾಯುವೆ, ಬದುಕುವುದಿಲ್ಲ!’” ಎಂದು ಹೇಳಿದನು.


ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.


ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.


ಆ ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು.


ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.


ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


ಆತನು ದುಷ್ಟರಿಗೆ ತೊಂದರೆಯನ್ನೂ ನಾಶನವನ್ನೂ ತಪ್ಪಿತಸ್ಥರಿಗೆ ವಿಪತ್ತನ್ನೂ ಕಳುಹಿಸುವನು.


ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ಷಾಲೋಮನಿಗೆ ಅಹೀತೋಫೆಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗೆಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು.


ದಾವೀದನು ಮತ್ತು ಅವನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋದರು. ಸೂರ್ಯನು ಮೇಲೇರುವುದಕ್ಕೆ ಮುಂಚೆಯೇ, ದಾವೀದನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋಗಿದ್ದರು.


ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.


ನನ್ನ ಶತ್ರುವಿಗೂ ನನ್ನನ್ನು ಕೊಲ್ಲಬೇಕೆಂದಿರುವವರಿಗೂ ಯೆಹೋವನು ಅವುಗಳನ್ನು ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು