2 ಸಮುಯೇಲ 17:25 - ಪರಿಶುದ್ದ ಬೈಬಲ್25 ಅಬ್ಷಾಲೋಮನು ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ಮಾಡಿದನು. ಅಮಾಸನು ಯೋವಾಬನ ಸ್ಥಾನಕ್ಕೆ ಬಂದನು. ಅಮಾಸನು ಇಸ್ರೇಲನಾದ ಇತ್ರನ ಮಗ. ಅಮಾಸನ ತಾಯಿಯಾದ ಅಬೀಗಲಳು, ನಾಹಾಷನ ಮಗಳು ಮತ್ತು ಚೆರೂಯಳ ಸೋದರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇವಿುಸಿದನು. ಇಸ್ರಾಯೇಲ್ಯನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬವಳನ್ನು ಕೂಡಿದ್ದರಿಂದ ಈ ಅಮಾಸನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯಾಗಿ ಇಟ್ಟಿದ್ದನು. ಈ ಅಮಾಸನು ಇಸ್ರಾಯೇಲನಾದ ಇತ್ರನ ಮಗನು. ಈ ಇತ್ರನು ನಾಹಾಷನ ಮಗಳೂ, ಯೋವಾಬನ ತಾಯಿಯೂ, ಚೆರೂಯಳ ಸಹೋದರಿಯೂ ಆದ ಅಬೀಗೈಲಳನ್ನು ಮದುವೆಯಾಗಿದ್ದನು. ಅಧ್ಯಾಯವನ್ನು ನೋಡಿ |
ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.
“ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.
ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು.