Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:28 - ಪರಿಶುದ್ದ ಬೈಬಲ್‌

28-29 ಅವರು, “ಅರಣ್ಯದಲ್ಲಿ ಪ್ರಯಾಣಮಾಡಿ ಜನರು ದಣಿದಿದ್ದಾರೆ, ಹಸಿದಿದ್ದಾರೆ ಮತ್ತು ದಾಹಗೊಂಡಿದ್ದಾರೆ” ಎಂದು ಹೇಳಿ, ದಾವೀದನಿಗೂ ಅವನ ಜನರಿಗೂ ತಿನ್ನಲು ಅನೇಕ ಆಹಾರಪದಾರ್ಥಗಳನ್ನು ತಂದರು. ಅವರು ಹಾಸಿಗೆಗಳನ್ನು, ಬಟ್ಟಲುಗಳನ್ನು ಮತ್ತು ಮಡಕೆಕುಡಿಕೆಗಳನ್ನು, ಗೋಧಿ, ಬಾರ್ಲಿ, ಹಿಟ್ಟು, ಹುರಿದಕಾಳುಗಳು, ಅವರೆ, ಅಲಸಂದಿ, ಒಣಗಿಸಿದ ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿ ಮತ್ತು ಹಸುವಿನ ಹಾಲಿನಿಂದ ಮಾಡಿದ ಗಿಣ್ಣು ಇವುಗಳನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳನ್ನು ಕೊಟ್ಟರು; ಊಟಕ್ಕಾಗಿ ಗೋದಿ, ಜವೆಗೋದಿ ಹಿಟ್ಟು, ಹುರಿಗಾಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಬರ್ಜಿಲ್ಲೈ ಎಂಬವರು ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳನ್ನೂ ಊಟಕ್ಕಾಗಿ ಗೋದಿ ಜವೇಗೋದಿ ಹಿಟ್ಟು ಹುರಿಗಾಳು ಅವರೆ ಅಲಸಂದಿ ಬೇಳೆ ಜೇನುತುಪ್ಪ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹಾಸಿಗೆಗಳನ್ನು, ಬಟ್ಟಲುಗಳನ್ನು, ಮಡಕೆ, ಗೋಧಿ, ಜವೆಗೋಧಿ, ಹಿಟ್ಟು, ಹುರಿದ ಕಾಳು ಅವರೆ, ಅಲಸಂದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:28
7 ತಿಳಿವುಗಳ ಹೋಲಿಕೆ  

ನಿನ್ನ ಹೆಚ್ಚಳಿಕೆಯು ನಿನ್ನನ್ನು ಮರುಳುಗೊಳಿಸಿತು. ನೀನು ಎತ್ತರವಾದ ಬೆಟ್ಟದಂಚಿನ ಗುಹೆಗಳಲ್ಲಿ ವಾಸಿಸುವೆ. ನಿನ್ನ ಮನೆಯು ಪರ್ವತಗಳಲ್ಲಿದೆ. ಆದ್ದರಿಂದ ನೀನು ನಿನ್ನಲ್ಲಿ ಹೇಳಿಕೊಳ್ಳುವದೇನೆಂದರೆ, ‘ಯಾರೂ ನನ್ನನ್ನು ಕೆಳಗೆ ಭೂಮಿಯ ಮೇಲೆ ಇಳಿಸಲಾರರು.’”


ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.


ಅಬೀಗೈಲಳು ಇನ್ನೂರು ರೊಟ್ಟಿಗಳನ್ನೂ ಎರಡು ದ್ರಾಕ್ಷಾರಸದ ಚೀಲಗಳನ್ನೂ ಐದು ಕುರಿಗಳ ಬೇಯಿಸಿದ ಮಾಂಸವನ್ನೂ ಹದಿನೇಳು ಕಿಲೋಗ್ರಾಂ ಬೇಯಿಸಿದ ಕಾಳನ್ನೂ ನೂರುಗೊಂಚಲು ಒಣದ್ರಾಕ್ಷಿಯನ್ನೂ ಅಂಜೂರ ಹಣ್ಣಿನ ಇನ್ನೂರು ಉಂಡೆಗಳನ್ನೂ ತ್ವರಿತವಾಗಿ ತೆಗೆದುಕೊಂಡಳು. ಅವಳು ಅವುಗಳನ್ನು ಕತ್ತೆಗಳ ಮೇಲೆ ಹೇರಿದಳು.


ಕರುಣೆ ತೋರುವವರು ಧನ್ಯರು. ಅವರು ಕರುಣೆ ಹೊಂದುವರು.


ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.


ಉದಾರಿಯು ಅಭಿವೃದ್ಧಿಯಾಗುವನು. ಬೇರೆಯವರಿಗೆ ಸಹಾಯಮಾಡುವವನು ಸಹಾಯವನ್ನು ಹೊಂದಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು