Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:4 - ಪರಿಶುದ್ದ ಬೈಬಲ್‌

4 ಈ ಉಪಾಯವು ಅಬ್ಷಾಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗೆಲ್ಲ ಸರಿಯೆಂದು ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಸಲಹೆ ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರೆಲ್ಲರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲ್ಯರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಮಾತು ಅಬ್ಷಾಲೋಮನ ದೃಷ್ಟಿಗೂ, ಇಸ್ರಾಯೇಲಿನ ಸಮಸ್ತ ಹಿರಿಯರ ದೃಷ್ಟಿಗೂ ಒಳ್ಳೆಯದಾಗಿ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:4
8 ತಿಳಿವುಗಳ ಹೋಲಿಕೆ  

ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.


ಅರಸನೂ ಅವನ ಪ್ರಮುಖ ಅಧಿಕಾರಿಗಳೂ ಈ ಸಲಹೆಯನ್ನು ಕೇಳಿ ಸಂತೋಷಪಟ್ಟರು ಮತ್ತು ಅಹಷ್ವೇರೋಷ ರಾಜನು ಮೆಮೂಕಾನ್ ಹೇಳಿದ ಹಾಗೆ ಮಾಡಿದನು.


ಈ ನಿರ್ಧಾರವು ಅರಸನಾದ ಹಿಜ್ಕೀಯನಿಗೂ ಜನರಿಗೂ ಸರಿಕಂಡಿತು.


ಸೌಲನು, “ನೀವು ನನಗೆ ಸಹಾಯ ಮಾಡುತ್ತಿರುವುದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.


ಅನಂತರ ನಾನು ಜನರೆಲ್ಲರನ್ನೂ ಹಿಂದಕ್ಕೆ ನಿನ್ನ ಬಳಿಗೆ ಕರೆತರುತ್ತೇನೆ. ದಾವೀದನು ಸತ್ತರೆ, ಜನರೆಲ್ಲರೂ ಸಮಾಧಾನದಿಂದ ಹಿಂದಕ್ಕೆ ಬರುತ್ತಾರೆ” ಎಂದು ಅಬ್ಷಾಲೋಮನಿಗೆ ಹೇಳಿದನು.


ಆದರೆ ಅಬ್ಷಾಲೋಮನು, “ಈಗ ಅರ್ಕೀಯನಾದ ಹೂಷೈಯನನ್ನು ಕರೆಯಿರಿ. ಅವನು ಏನು ಹೇಳುತ್ತಾನೆಂಬುದನ್ನು ನಾನು ಕೇಳಬೇಕಾಗಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು