Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:8 - ಪರಿಶುದ್ದ ಬೈಬಲ್‌

8 ಅವನು ಮಾತನ್ನು ಮುಂದುವರಿಸಿ, “ನಿನ್ನ ತಂದೆಯು ಮತ್ತು ಅವನ ಜನರು ಶೂರರೆಂಬುದು ನಿನಗೆ ತಿಳಿದಿದೆ. ಕಾಡಿನಲ್ಲಿ ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರು ರೋಷವುಳ್ಳವರಾಗಿದ್ದಾರೆ. ನಿನ್ನ ತಂದೆಯು ಒಬ್ಬ ನುರಿತ ಹೋರಾಟಗಾರ. ಅವನು ಜನರೊಂದಿಗೆ ರಾತ್ರಿಯಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಮ್ಮ ತಂದೆ ಮತ್ತು ಅವನ ಜನರೂ ಶೂರರಾಗಿದ್ದಾರೆಂದೂ, ಈಗಲಾದರೋ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷ ಉಳ್ಳವರಾಗಿದ್ದಾರೆಂದೂ ತಮಗೆ ಗೊತ್ತುಂಟಲ್ಲವೆ? ಇದಲ್ಲದೆ ತಮ್ಮ ತಂದೆ ಯುದ್ಧ ನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ತಂದೆಯೂ ಅವನ ಜನರೂ ಶೂರರಾಗಿದ್ದಾರೆಂದೂ ಈಗ ಅವರು ಮರಿಯನ್ನು ಕಳಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದೂ ನಿನಗೆ ಗೊತ್ತುಂಟಲ್ಲಾ; ಇದಲ್ಲದೆ ಅವನು ಯುದ್ಧನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೂಷೈ, “ನಿನ್ನ ತಂದೆಯೂ, ಅವನ ಮನುಷ್ಯರೂ ಪರಾಕ್ರಮಶಾಲಿಗಳು. ಅವರು ಅಡವಿಯಲ್ಲಿ ಮರಿಗಳನ್ನು ಕಳೆದುಕೊಂಡ ಕರಡಿಯ ಹಾಗೆಯೇ ಕೋಪವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು. ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:8
20 ತಿಳಿವುಗಳ ಹೋಲಿಕೆ  

ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”


ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.


“ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು.


ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.


ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.


ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.


ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು.


ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು,


ಅವನ ಸೇವಕರೆಲ್ಲ ರಾಜನನ್ನು ದಾಟಿ ಮುಂದೆ ಹೋದರು. ಕೆರೇತ್ಯರು, ಪೆಲೇತ್ಯರು ಮತ್ತು ಗಿತ್ತೀಯರು (ಗತ್‌ನ ಆರುನೂರು ಜನರು) ರಾಜನನ್ನು ದಾಟಿಹೋದರು.


ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.


ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ.


ಅದಕ್ಕೆ ದಾನ್ಯರು, “ನೀನು ನಮ್ಮ ಜೊತೆ ವಾದವಿವಾದ ಮಾಡದಿರುವುದೇ ಒಳ್ಳೆಯದು. ನಮ್ಮಲ್ಲಿ ಬಹಳ ಸಿಟ್ಟಿನ ಕೆಲವರಿದ್ದಾರೆ. ನೀನು ಹೀಗೆ ಕೂಗಾಡಿದರೆ ಅವರು ನಿಮ್ಮ ಮೇಲೆ ಧಾಳಿ ಮಾಡಬಹುದು. ಆಗ ನೀನು ಮತ್ತು ನಿನ್ನ ಕುಟುಂಬದವರು ಸತ್ತು ಹೋಗುವಿರಿ” ಎಂದು ಪ್ರತ್ಯುತ್ತರ ಕೊಟ್ಟರು.


ಈಗಾಗಲೇ ಅವನು ಒಂದು ಗವಿಯಲ್ಲಾಗಲಿ ಇಲ್ಲವೆ ಬೇರೆ ಯಾವ ಸ್ಥಳದಲ್ಲಾಗಲಿ ಅಡಗಿಕೊಂಡಿರಬಹುದು. ನಿನ್ನ ತಂದೆಯು ನಿನ್ನ ಜನರ ಮೇಲೆ ಆಕ್ರಮಣ ಮಾಡಿದರೆ, ಆಗ ಜನರಿಗೆ ಸುದ್ದಿಯು ತಿಳಿಯುತ್ತದೆ. ‘ಅಬ್ಷಾಲೋಮನ ಹಿಂಬಾಲಕರು ಸೋಲುತ್ತಿದ್ದಾರೆ’ ಎಂದು ಅವರು ಯೋಚಿಸುತ್ತಾರೆ.


“‘ನಿನ್ನ ತಾಯಿಯು ಏನಾಗಿದ್ದಳು? ಆಕೆಯು ಸಿಂಹಗಳ ಮಧ್ಯದಲ್ಲಿ ಸಿಂಹಿಣಿಯಾಗಿದ್ದಳು. ಆಕೆಯು ಪ್ರಾಯದ ಸಿಂಹಗಳೊಡನೆ ಮಲಗಿ ತನ್ನ ಮರಿಗಳನ್ನು ಸಾಕಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು