2 ಸಮುಯೇಲ 18:10 - ಪರಿಶುದ್ದ ಬೈಬಲ್10 ಇದನ್ನು ಕಂಡ ಒಬ್ಬನು ಯೋವಾಬನ ಬಳಿಗೆ ಹೋಗಿ, “ಅಬ್ಷಾಲೋಮನು ಒಂದು ಓಕ್ ಮರದಲ್ಲಿ ನೇತಾಡುತ್ತಿದ್ದುದನ್ನು ನಾನು ನೋಡಿದೆ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದನ್ನು ನೋಡಿದ ಒಬ್ಬ ವ್ಯಕ್ತಿ ಯೋವಾಬನಿಗೆ, “ನೋಡಿ, ಆ ಓಕ್ ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ - ಅಗೋ, ಆ ಏಲಾಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವದನ್ನು ಕಂಡೆನು ಎಂದು ಹೇಳಲು ಯೋವಾಬನು ಅವನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.