2 ಸಮುಯೇಲ 18:14 - ಪರಿಶುದ್ದ ಬೈಬಲ್14 ಯೋವಾಬನು, “ನಿನ್ನೊಂದಿಗೆ ನಾನಿಲ್ಲಿ ನನ್ನ ಕಾಲವನ್ನು ವ್ಯರ್ಥಮಾಡುವುದಿಲ್ಲ” ಎಂದನು. ಅಬ್ಷಾಲೋಮನು ಓಕ್ ಮರದಲ್ಲಿ ನೇತಾಡುತ್ತಾ ಇನ್ನೂ ಜೀವಂತವಾಗಿದ್ದನು. ಯೋವಾಬನು ಮೂರು ಬರ್ಜಿಗಳನ್ನು ತೆಗೆದುಕೊಂಡು ಅಬ್ಷಾಲೋಮನತ್ತ ಎಸೆದನು. ಬರ್ಜಿಗಳು ಅಬ್ಷಾಲೋಮನ ಹೃದಯವನ್ನು ಛೇದಿಸಿಕೊಂಡು ಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೋವಾಬನು - ಇಲ್ಲಿ ನಿಂತು ತಡ ಮಾಡುವದೇಕೆ ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು. ಅಧ್ಯಾಯವನ್ನು ನೋಡಿ |
ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.