Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:17 - ಪರಿಶುದ್ದ ಬೈಬಲ್‌

17 ನಂತರ ಯೋವಾಬನ ಜನರು ಅಬ್ಷಾಲೋಮನ ದೇಹವನ್ನು ತೆಗೆದುಕೊಂಡು ಹೋಗಿ, ಕಾಡಿನ ಒಂದು ದೊಡ್ಡ ಕುಣಿಯಲ್ಲಿ ಎಸೆದರು. ಅವರು ಆ ದೊಡ್ಡ ಕುಣಿಯನ್ನು ಕಲ್ಲುಗಳಿಂದ ತುಂಬಿಸಿದರು. ಅಬ್ಷಾಲೋಮನನ್ನು ಹಿಂಬಾಲಿಸಿಕೊಂಡು ಬಂದಿದ್ದ ಇಸ್ರೇಲರೆಲ್ಲ ಮನೆಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ಬಲುದೊಡ್ಡ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:17
15 ತಿಳಿವುಗಳ ಹೋಲಿಕೆ  

ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ “ಆಕೋರ್ ಕಣಿವೆ” ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು.


ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು.


ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.


ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.


ಆಗ ರಾಜನು ನಗರದ ಬಾಗಿಲಿಗೆ ಹೋದನು. ರಾಜನು ಬಾಗಿಲಿನ ಬಳಿಯಲ್ಲಿದ್ದಾನೆಂಬ ಸುದ್ದಿಯು ಹರಡಿತು. ಆದ್ದರಿಂದ ಜನರೆಲ್ಲರೂ ರಾಜನನ್ನು ನೋಡಲು ಬಂದರು. ಅಬ್ಷಾಲೋಮನ ಹಿಂಬಾಲಕರಾದ ಇಸ್ರೇಲರೆಲ್ಲ ಮನೆಗಳಿಗೆ ಓಡಿಹೋದರು.


ಸೂರ್ಯಾಸ್ತಮಾನದ ಹೊತ್ತಿಗೆ ಯೆಹೋಶುವನು ಆ ದೇಹಗಳನ್ನು ಮರದಿಂದ ಕೆಳಗಿಳಿಸಲು ಹೇಳಿದನು. ಆಮೇಲೆ ಅವರು ಎಲ್ಲಿ ಅಡಗಿಕೊಂಡಿದ್ದರೋ ಅದೇ ಗುಹೆಯಲ್ಲಿ ಆ ಶವಗಳನ್ನು ಬಿಸಾಡಿದರು. ಆ ಗುಹೆಯ ದ್ವಾರವನ್ನು ದೊಡ್ಡ ಕಲ್ಲುಬಂಡೆಗಳಿಂದ ಮುಚ್ಚಿದರು. ಆ ದೇಹಗಳು ಇಂದಿಗೂ ಆ ಗುಹೆಯಲ್ಲಿವೆ.


ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’


ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.


ಫಿಲಿಷ್ಟಿಯರು ಶೌರ್ಯದಿಂದ ಹೋರಾಡಿ ಇಸ್ರೇಲರನ್ನು ಸೋಲಿಸಿದರು. ಇಸ್ರೇಲರ ಪ್ರತಿಯೊಬ್ಬ ಸೈನಿಕನೂ ತನ್ನ ಪಾಳೆಯಕ್ಕೆ ಓಡಿಹೋದನು. ಇಸ್ರೇಲರಿಗೆ ಭೀಕರ ಸೋಲಾಯಿತು. ಮೂವತ್ತು ಸಾವಿರ ಇಸ್ರೇಲರು ಹತರಾದರು.


ಆಗ ಯೆಹೋರಾಮನು ಮತ್ತು ಅವನ ರಥಗಳೆಲ್ಲ ಚಾಯೀರಿಗೆ ಹೋದವು. ಎದೋಮಿನ ಸೇನೆಯು ಅವರನ್ನು ಸುತ್ತುವರಿಯಿತು. ಯೆಹೋರಾಮನು ತನ್ನ ಅಧಿಕಾರಿಗಳೊಂದಿಗೆ ಅವರನ್ನು ರಾತ್ರಿಯಲ್ಲಿ ಮುತ್ತಿಗೆ ಹಾಕಿ ತಪ್ಪಿಸಿಕೊಂಡರು. ಆದರೆ ಅವನ ಸೈನಿಕರು ತಮ್ಮ ಗುಡಾರಗಳಿಗೆ ಓಡಿಹೋದರು.


ಯೆಹೂದ್ಯರನ್ನು ಇಸ್ರೇಲರು ಸೋಲಿಸಿದರು. ಯೆಹೂದದ ಪ್ರತಿಯೊಬ್ಬರೂ ಮನೆಗೆ ಓಡಿಹೋದರು.


ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, “ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು.


ಇಸ್ರೇಲಿನ ಕುಲಗಳ ಜನರೆಲ್ಲರೂ ತಮ್ಮಲ್ಲೇ ಚರ್ಚಿಸಿದರು. ಅವರು, “ರಾಜನಾದ ದಾವೀದನು ಫಿಲಿಷ್ಟಿಯರಿಂದ ಮತ್ತು ಇತರ ಶತ್ರುಗಳಿಂದ ನಮ್ಮನ್ನು ರಕ್ಷಿಸಿದನು. ಅಬ್ಷಾಲೋಮನಿಂದಾಗಿ ದಾವೀದನು ಓಡಿಹೋಗಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು