2 ಸಮುಯೇಲ 18:18 - ಪರಿಶುದ್ದ ಬೈಬಲ್18 ಅಬ್ಷಾಲೋಮನು ಬದುಕಿದ್ದಾಗ, ರಾಜನ ಕಣಿವೆಯಲ್ಲಿ ಒಂದು ಸ್ತಂಭವನ್ನು ನೆಡಿಸಿದ್ದನು. ಅಬ್ಷಾಲೋಮನು, “ನನ್ನ ಹೆಸರನ್ನು ಜೀವಂತವಾಗಿರಿಸಲು ನನಗೆ ಗಂಡುಮಕ್ಕಳಿಲ್ಲ” ಎಂದು ಹೇಳಿ ಆ ಸ್ತಂಭಕ್ಕೆ ತನ್ನ ಹೆಸರನ್ನೇ ಕೊಟ್ಟಿದ್ದನು. ಆ ಸ್ತಂಭವನ್ನು “ಅಬ್ಷಾಲೋಮನ ಸ್ಮಾರಕಸ್ತಂಭ” ಎಂದು ಇಂದಿಗೂ ಕರೆಯುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ ತನ್ನ ಹೆಸರನ್ನುಳಿಸುವ ಮಗನಿಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ ಅದಕ್ಕೆ ತನ್ನ ಹೆಸರನ್ನಿಟ್ಟನು. ಅದು ಇಂದಿನವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭವೆಂದೆನಿಸಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ. ಅಧ್ಯಾಯವನ್ನು ನೋಡಿ |
ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.