Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:19 - ಪರಿಶುದ್ದ ಬೈಬಲ್‌

19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಈಗ ಓಡುತ್ತಾಹೋಗಿ ರಾಜನಾದ ದಾವೀದನಿಗೆ ಈ ವರ್ತಮಾನವನ್ನು ತಿಳಿಸುತ್ತೇನೆ. ಯೆಹೋವನು ನಿನ್ನ ಶತ್ರುವನ್ನು ನಾಶಮಾಡಿದನೆಂದು ನಾನು ಅವನಿಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ - ಅಪ್ಪಣೆಯಾಗಲಿ, ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭವರ್ತಮಾನವನ್ನು ತಿಳಿಸುವೆನು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:19
15 ತಿಳಿವುಗಳ ಹೋಲಿಕೆ  

ಚಾದೋಕನ ಮಗನಾದ ಅಹೀಮಾಚನ ಮತ್ತು ಎಬ್ಯಾತಾರನ ಮಗನಾದ ಯೋನಾತಾನನ ಮೂಲಕ ನೀನು ಕೇಳಿಸಿಕೊಂಡಿದ್ದನೆಲ್ಲ ನನಗೆ ತಿಳಿಸಬೇಕು” ಎಂದು ಹೇಳಿಕೊಟ್ಟನು.


ಇಥಿಯೋಪ್ಯದವನು ಬಂದನು. ಅವನು, “ನನ್ನ ರಾಜನಾದ ಪ್ರಭುವಿಗೆ ಸುದ್ದಿಯಿದೆ, ನಿನ್ನ ವಿರುದ್ಧವಾಗಿದ್ದ ಜನರನ್ನು ಇಂದು ಯೆಹೋವನು ದಂಡಿಸಿದನು!” ಎಂದು ಹೇಳಿದನು.


ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು.


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


ನೀನು ನೀತಿವಂತನಾದ ನ್ಯಾಯಾಧಿಪತಿ. ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ. ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ.


ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು!


ಅಹೀಮಾಚನು, “ಏನಾದರೂ ಆಗಲಿ, ನಾನು ಓಡಿಹೋಗುತ್ತೇನೆ” ಎಂದು ಉತ್ತರಿಸಿದನು. “ಓಡು” ಎಂದು ಯೋವಾಬನು ಅಹೀಮಾಚನಿಗೆ ಹೇಳಿದನು. ಆಗ ಅಹೀಮಾಚನು ಜೋರ್ಡನ್ ಕಣಿವೆಯ ಮೂಲಕ ಓಡಿಹೋದನು. ಅವನು ಇಥಿಯೋಪ್ಯದವನಿಗಿಂತ ಮೊದಲೇ ಹೋದನು.


ಯಾಜಕರ ಮಕ್ಕಳಾದ ಯೋನಾತಾನನು ಮತ್ತು ಅಹೀಮಾಚನು ಎನ್-ರೋಗೆಲಿನ ಬುಗ್ಗೆಯ ಹತ್ತಿರ ಕಾದಿದ್ದರು. ತಾವು ನಗರದೊಳಕ್ಕೆ ಹೋಗುವುದನ್ನು ಯಾರೂ ನೋಡಬಾರದೆಂದು ಅವರು ಅಲ್ಲಿ ಅಡಗಿಕೊಂಡಿದ್ದರು. ಆದ್ದರಿಂದ ಕೆಲಸದ ಹುಡುಗಿಯೊಬ್ಬಳು ಹೊರಗೆ ಬಂದು ಅವರಿಗೆ ಆ ಸಂದೇಶವನ್ನು ತಿಳಿಸಿದಳು. ಬಳಿಕ ಯೋನಾತಾನನು ಮತ್ತು ಅಹೀಮಾಚನು ದಾವೀದ ರಾಜನ ಬಳಿಗೆ ಹೋಗಿ ಅದನ್ನು ತಿಳಿಸಿದರು.


ಯೋವಾಬನು ಅಹೀಮಾಚನಿಗೆ, “ಇಲ್ಲ, ದಾವೀದನಿಗೆ ಇಂದು ನೀನು ಈ ವರ್ತಮಾನವನ್ನು ತಿಳಿಸುವಂತಿಲ್ಲ. ನೀನು ಬೇರೊಂದು ದಿನದಲ್ಲಿ ವರ್ತಮಾನವನ್ನು ತಿಳಿಸಬಹುದು, ಏಕೆಂದರೆ ಇಂದು ರಾಜನ ಮಗನು ಸತ್ತಿದ್ದಾನೆ” ಎಂದು ಉತ್ತರಿಸಿದನು.


ಒಬ್ಬ ಸಂದೇಶಕನ ನಂತರ ಇನ್ನೊಬ್ಬ ಸಂದೇಶಕನು ಬರುವನು. ಸಂದೇಶಕರ ಮೇಲೆ ಸಂದೇಶಕರು ಬಂದು, ಇಡೀ ನಗರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಬಾಬಿಲೋನಿನ ರಾಜನಿಗೆ ತಿಳಿಸುತ್ತಾರೆ.


ರಾಜನು ಯಾಜಕನಾದ ಚಾದೋಕನಿಗೆ, “ನೀನೊಬ್ಬ ದೇವದರ್ಶಿ. ಸಮಾಧಾನದಿಂದ ನಗರಕ್ಕೆ ಹಿಂದಿರುಗು. ನಿನ್ನ ಮಗನಾದ ಅಹೀಮಾಚನನ್ನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು