Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:23 - ಪರಿಶುದ್ದ ಬೈಬಲ್‌

23 ಅಹೀಮಾಚನು, “ಏನಾದರೂ ಆಗಲಿ, ನಾನು ಓಡಿಹೋಗುತ್ತೇನೆ” ಎಂದು ಉತ್ತರಿಸಿದನು. “ಓಡು” ಎಂದು ಯೋವಾಬನು ಅಹೀಮಾಚನಿಗೆ ಹೇಳಿದನು. ಆಗ ಅಹೀಮಾಚನು ಜೋರ್ಡನ್ ಕಣಿವೆಯ ಮೂಲಕ ಓಡಿಹೋದನು. ಅವನು ಇಥಿಯೋಪ್ಯದವನಿಗಿಂತ ಮೊದಲೇ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಅಹೀಮಾಚನು ಮತ್ತೊಮ್ಮೆ, “ಚಿಂತೆಯಿಲ್ಲ, ನನ್ನನ್ನೂ ಕಳುಹಿಸಿ,” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು, “ಹೋಗು,” ಎಂದು ಹೇಳಿದನು. ಆಗ ಅಹೀಮಾಚನು ಜೋರ್ಡನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು‍.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ಅಹೀಮಾಚನು ತಿರಿಗಿ - ಚಿಂತೆಯಿಲ್ಲ, ನನ್ನನ್ನೂ ಕಳುಹಿಸು ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು ಹೋಗು ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:23
4 ತಿಳಿವುಗಳ ಹೋಲಿಕೆ  

ಅವರಿಬ್ಬರೂ ಓಡುತ್ತಾ ಹೋದರು. ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತಲೂ ವೇಗವಾಗಿ ಓಡುತ್ತಾ ಹೋಗಿ ಸಮಾಧಿಯನ್ನು ಮೊದಲು ತಲುಪಿದನು.


ಆಗ ಯೋವಾಬನು ಇಥಿಯೋಪ್ಯನಾದ ಒಬ್ಬನಿಗೆ, “ಹೋಗು, ನೀನು ನೋಡಿದ ಸಂಗತಿಗಳನ್ನು ರಾಜನಿಗೆ ತಿಳಿಸು” ಎಂದು ಹೇಳಿದನು. ಇಥಿಯೋಪ್ಯನು ಯೋವಾಬನಿಗೆ ಸಾಷ್ಟಾಂಗನಮಸ್ಕಾರಮಾಡಿ ದಾವೀದನಿಗೆ ಹೇಳಲು ಓಡಿಹೋದನು.


ಆದರೆ ಚಾದೋಕನ ಮಗನಾದ ಅಹೀಮಾಚನು ಯೋವಾಬನನ್ನು ಮತ್ತೆ ಬೇಡುತ್ತಾ, “ಏನು ಸಂಭವಿಸುತ್ತದೆಯೊ ಸಂಭವಿಸಲಿ, ಇಥಿಯೋಪ್ಯದವನ ಹಿಂದೆ ಓಡಿಹೋಗಲು ನನಗೆ ಅವಕಾಶಕೊಡು!” ಎಂದನು. ಯೋವಾಬನು, “ಮಗನೇ, ಈ ವರ್ತಮಾನವನ್ನು ತೆಗೆದುಕೊಂಡು ಹೋಗಲು ನೀನು ಏಕೆ ಇಚ್ಛಿಸುವೆ? ನೀನು ತೆಗೆದುಕೊಂಡು ಹೋಗುವ ವರ್ತಮಾನಕ್ಕೆ ನಿನಗೆ ಯಾವ ಬಹುಮಾನವೂ ಸಿಕ್ಕುವುದಿಲ್ಲ” ಎಂದನು.


ದಾವೀದನು ನಗರದ ಎರಡು ಬಾಗಿಲುಗಳ ನಡುವೆ ಕುಳಿತಿದ್ದನು. ಕಾವಲುಗಾರನು ಊರಬಾಗಿಲುಗಳ ಮಾಳಿಗೆಯ ಮೇಲಕ್ಕೆ ಹೋದನು. ಕಾವಲುಗಾರನು ದೃಷ್ಟಿಸಿ ನೋಡಿದಾಗ, ಒಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡಿಬರುತ್ತಿರುವುದನ್ನು ನೋಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು