Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:27 - ಪರಿಶುದ್ದ ಬೈಬಲ್‌

27 ಕಾವಲುಗಾರನು, “ಮೊದಲನೆಯ ಮನುಷ್ಯನು ಓಡುತ್ತಿರುವುದು ಚಾದೋಕನ ಮಗನಾದ ಅಹೀಮಾಚನಂತಿದೆಯೆಂದು ನನ್ನ ಭಾವನೆ” ಎಂದು ಹೇಳಿದನು. ರಾಜನು, “ಅಹೀಮಾಚನು ಒಳ್ಳೆಯ ಮನುಷ್ಯ. ಅವನು ಶುಭಸಮಾಚಾರವನ್ನು ತರುತ್ತಿರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟ ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು; ಶುಭವರ್ತಮಾನ ತರುವವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕಾವಲುಗಾರನು - ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ ಎಂದನು. ಅದಕ್ಕೆ ಅರಸನು - ಅವನು ಒಳ್ಳೆಯವನು; ಶುಭವರ್ತಮಾನತರುವವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:27
7 ತಿಳಿವುಗಳ ಹೋಲಿಕೆ  

ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಎರಡನೆಯವನೂ ಈವರೆವಿಗೂ ಹಿಂದುರುಗಿ ಬರಲೇ ಇಲ್ಲ. ರಥವನ್ನು ಓಡಿಸುತ್ತಿರುವವನು ಹುಚ್ಚನಂತೆ ರಥವನ್ನು ಓಡಿಸುತ್ತಿರುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವಿರಬೇಕು!” ಎಂದು ಹೇಳಿದನು.


ಯೋವಾಬನು ಮಾತನಾಡುತ್ತಿದ್ದಂತೆ, ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು, “ಇಲ್ಲಿಗೆ ಬಾ! ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ನೀನು ನನಗೆ ಶುಭ ಸಮಾಚಾರವನ್ನೇ ತಂದಿರುವೆ” ಎಂದು ಹೇಳಿದನು.


ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು.


ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.


ಅವನ ಹಿಂದೆ ಇನ್ನೊಬ್ಬ ಮನುಷ್ಯನು ಓಡಿಬರುತ್ತಿರುವುದನ್ನು ಕಾವಲುಗಾರನು ನೋಡಿದನು. ಕಾವಲುಗಾರನು ದ್ವಾರಪಾಲಕನನ್ನು ಕರೆದು, “ನೋಡು! ಇನ್ನೊಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡುತ್ತಾ ಬರುತ್ತಿದ್ದಾನೆ” ಎಂದನು. ರಾಜನು, “ಅವನು ಸಹ ಸುದ್ದಿಯನ್ನು ತರುತ್ತಿದ್ದಾನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು