Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:29 - ಪರಿಶುದ್ದ ಬೈಬಲ್‌

29 ರಾಜನು, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅಹೀಮಾಚನು, “ಯೋವಾಬನು ನನ್ನನ್ನು ಕಳುಹಿಸಿದಾಗ, ನಾನು ಒಂದು ದೊಡ್ಡ ಕೋಲಾಹಲವನ್ನು ನೋಡಿದೆನು. ಆದರೆ ಅದು ಏನೆಂದು ನನಗೆ ಗೊತ್ತಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಅರಸನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆ.ಆದರೆ ಸಂಗತಿಯೇನೆಂಬುದು ನನಗೆ ಗೊತ್ತಾಗಲಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಿದನು. ಅದಕ್ಕೆ ಅಹೀಮಾಚನು ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು. ಆದರೆ ಸಂಗತಿಯೇನೆಂಬದು ನನಗೆ ಗೊತ್ತಾಗಲಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:29
6 ತಿಳಿವುಗಳ ಹೋಲಿಕೆ  

ಆದರೆ ಚಾದೋಕನ ಮಗನಾದ ಅಹೀಮಾಚನು ಯೋವಾಬನನ್ನು ಮತ್ತೆ ಬೇಡುತ್ತಾ, “ಏನು ಸಂಭವಿಸುತ್ತದೆಯೊ ಸಂಭವಿಸಲಿ, ಇಥಿಯೋಪ್ಯದವನ ಹಿಂದೆ ಓಡಿಹೋಗಲು ನನಗೆ ಅವಕಾಶಕೊಡು!” ಎಂದನು. ಯೋವಾಬನು, “ಮಗನೇ, ಈ ವರ್ತಮಾನವನ್ನು ತೆಗೆದುಕೊಂಡು ಹೋಗಲು ನೀನು ಏಕೆ ಇಚ್ಛಿಸುವೆ? ನೀನು ತೆಗೆದುಕೊಂಡು ಹೋಗುವ ವರ್ತಮಾನಕ್ಕೆ ನಿನಗೆ ಯಾವ ಬಹುಮಾನವೂ ಸಿಕ್ಕುವುದಿಲ್ಲ” ಎಂದನು.


ಅವನು ಅಮಾಸನನ್ನು, “ಸೋದರನೇ, ನೀವೆಲ್ಲ ಕ್ಷೇಮವೇ?” ಎಂದು ಕೇಳಿದನು. ಯೋವಾಬನು ಅಮಾಸನಿಗೆ ಮುದ್ದಿಡಲು ಅವನ ಗಡ್ಡವನ್ನು ಬಲಗೈಯಲ್ಲಿ ಹಿಡಿದನು.


ಆಗ ರಾಜನು, “ಅತ್ತ ಸರಿದು ನಿಲ್ಲು” ಎಂದನು. ಅಹೀಮಾಚನು ಸರಿದು ನಿಂತುಕೊಂಡನು.


ರಾಜನು ಅವನಿಗೆ, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಇಥಿಯೋಪ್ಯದವನು, “ನಿನ್ನ ಶತ್ರುಗಳು ಮತ್ತು ನಿನಗೆ ಕೇಡುಮಾಡಲು ನಿನಗೆ ವಿರುದ್ಧವಾಗಿ ಬಂದ ಜನರೆಲ್ಲರು ಈ ಯುವಕನಂತೆಯೇ ದಂಡಿಸಲ್ಪಡುವರು” ಎಂದು ಉತ್ತರಿಸಿದನು.


ಅವಳನ್ನು ಭೇಟಿ ಮಾಡುವುದಕ್ಕೆ ಓಡಿಹೋಗಿ ಅವಳಿಗೆ, ‘ನೀನು ಕ್ಷೇಮವಾಗಿರುವೆಯಾ? ನಿನ್ನ ಗಂಡ ಕ್ಷೇಮವಾಗಿರುವನೇ? ನಿನ್ನ ಮಗು ಕ್ಷೇಮವಾಗಿರುವುದೇ?’ ಎಂದು ಕೇಳು” ಎಂಬುದಾಗಿ ಹೇಳಿ ಕಳುಹಿಸಿದನು. ಅಂತೆಯೇ ಗೇಹಜಿಯು ಆಕೆಯನ್ನು ಕೇಳಿದನು. ಅವಳು “ಹೌದು, ಕ್ಷೇಮವಾಗಿದ್ದೇವೆ” ಎಂದು ಉತ್ತರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು