2 ಸಮುಯೇಲ 18:3 - ಪರಿಶುದ್ದ ಬೈಬಲ್3 ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಸೈನಿಕರು, “ನೀವು ಬರಬಾರದು; ನಾವು ಸೋತು ಓಡಿಹೋದರೆ ಶತ್ರುಗಳು ಲಕ್ಷಿಸುವುದಿಲ್ಲ; ನಮ್ಮಲ್ಲಿ ಅರ್ಧಜನ ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿಮ್ಮೊಬ್ಬರಿಗೇ ಉಂಟು. ತಾವು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಸೈನ್ಯದವರು ಅವನಿಗೆ - ನೀನು ಬರಬಾರದು; ನಾವು ಸೋತು ಓಡಿ ಹೋದರೆ ಶತ್ರುಗಳು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿನ್ನೊಬ್ಬನಿಗೇ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು. ಅಧ್ಯಾಯವನ್ನು ನೋಡಿ |