Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:4 - ಪರಿಶುದ್ದ ಬೈಬಲ್‌

4 ರಾಜನು ತನ್ನ ಜನರಿಗೆ, “ನೀವು ಉತ್ತಮವೆಂದು ಯೋಚಿಸಿದ ಕಾರ್ಯವನ್ನು ನಾನು ಮಾಡುತ್ತೇನೆ” ಎಂದು ಹೇಳಿದನು. ಆಗ ರಾಜನು ಊರಬಾಗಿಲಿನ ಪಕ್ಕದಲ್ಲಿ ನಿಂತುಕೊಂಡನು. ಸೈನ್ಯವು ಹೊರಗೆ ಹೋಯಿತು. ಅವರು ನೂರು ಮತ್ತು ಒಂದು ಸಾವಿರ ಮಂದಿಯ ಗುಂಪುಗಳಾಗಿ ಹೋದರು. “ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅರಸನು, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ,” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿ, ಸಾವಿರ ಸಾವಿರ ಮಂದಿಯಾಗಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅರಸನು ಅವರಿಗೆ - ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ ಎಂದು ಹೇಳಿ ಊರುಬಾಗಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:4
5 ತಿಳಿವುಗಳ ಹೋಲಿಕೆ  

ದಾವೀದನು ನಗರದ ಎರಡು ಬಾಗಿಲುಗಳ ನಡುವೆ ಕುಳಿತಿದ್ದನು. ಕಾವಲುಗಾರನು ಊರಬಾಗಿಲುಗಳ ಮಾಳಿಗೆಯ ಮೇಲಕ್ಕೆ ಹೋದನು. ಕಾವಲುಗಾರನು ದೃಷ್ಟಿಸಿ ನೋಡಿದಾಗ, ಒಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡಿಬರುತ್ತಿರುವುದನ್ನು ನೋಡಿದನು.


ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ವಾರದಲ್ಲಿ ಯುದ್ಧಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.


ದಾವೀದನು ತನ್ನ ಜನರನ್ನು ಲೆಕ್ಕಮಾಡಿದನು. ಅವನು ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು.


ಫಿಲಿಷ್ಟಿಯರ ಅಧಿಪತಿಗಳು ನೂರು ಜನರ ಗುಂಪುಗಳಾಗಿಯೂ ಒಂದು ಸಾವಿರ ಜನರ ಗುಂಪುಗಳಾಗಿಯೂ ಬರುತ್ತಿದ್ದರು. ದಾವೀದನು ಮತ್ತು ಅವನ ಜನರು ಆಕೀಷನ ಹಿಂದೆ ಬರುತ್ತಿದ್ದರು.


ರಾಜನು ಯೋವಾಬನಿಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ, “ನೀವು ನನಗೋಸ್ಕರವಾಗಿ ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿ!” ಎಂದು ಆಜ್ಞಾಪಿಸಿದನು. ಅಬ್ಷಾಲೋಮನ ಬಗ್ಗೆ ತನ್ನ ಸೇನಾಪತಿಗಳಿಗೆ ರಾಜನು ನೀಡಿದ ಆಜ್ಞೆಯು ಜನರೆಲ್ಲರಿಗೂ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು