Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:5 - ಪರಿಶುದ್ದ ಬೈಬಲ್‌

5 ರಾಜನು ಯೋವಾಬನಿಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ, “ನೀವು ನನಗೋಸ್ಕರವಾಗಿ ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿ!” ಎಂದು ಆಜ್ಞಾಪಿಸಿದನು. ಅಬ್ಷಾಲೋಮನ ಬಗ್ಗೆ ತನ್ನ ಸೇನಾಪತಿಗಳಿಗೆ ರಾಜನು ನೀಡಿದ ಆಜ್ಞೆಯು ಜನರೆಲ್ಲರಿಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅರಸನು ಯೋವಾಬ್, ಅಬೀಷೈ ಹಾಗು ಇತ್ತೈ ಎಂಬವರಿಗೆ, “ನನ್ನ ಸಲುವಾಗಿ ಯುವಕ ಅಬ್ಷಾಲೋಮನಿಗೆ ಹಾನಿಮಾಡಬೇಡಿ,” ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆ ಸೈನ್ಯದವರಿಗೆಲ್ಲಾ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅರಸನು ಯೋವಾಬ್ ಅಬೀಷೈ ಇತ್ತೈ ಎಂಬವರಿಗೆ - ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:5
8 ತಿಳಿವುಗಳ ಹೋಲಿಕೆ  

ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.


ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು.


ಆ ಮನುಷ್ಯನು ಯೋವಾಬನಿಗೆ, “ನೀನು ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದರೂ ನಾನು ರಾಜನ ಮಗನನ್ನು ಕೊಲ್ಲಲು ಪ್ರಯತ್ನಿಸುತ್ತಿರಲಿಲ್ಲ. ಏಕೆಂದರೆ ನಿನಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ ರಾಜನು ನೀಡಿದ್ದ ಆಜ್ಞೆಯನ್ನು ನಾವು ಕೇಳಿದ್ದೇವೆ. ‘ಎಚ್ಚರದಿಂದಿರಿ, ಯುವಕನಾದ ಅಬ್ಷಾಲೋಮನಿಗೆ ಕೇಡುಮಾಡದಿರಿ’ ಎಂದು ರಾಜನು ಹೇಳಿದ್ದಾನೆ.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.


ಈ ಸುದ್ದಿಯನ್ನು ಜನರು ಯೋವಾಬನಿಗೆ ತಿಳಿಸಿದರು. ಅವರು ಯೋವಾಬನಿಗೆ, “ನೋಡು, ರಾಜನು ಅಳುತ್ತಿದ್ದಾನೆ ಮತ್ತು ಅಬ್ಷಾಲೋಮನಿಗಾಗಿ ಬಹಳ ದುಃಖಪಡುತ್ತಿದ್ದಾನೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು