2 ಸಮುಯೇಲ 18:8 - ಪರಿಶುದ್ದ ಬೈಬಲ್8 ಯುದ್ಧವು ದೇಶವನ್ನೆಲ್ಲ ವ್ಯಾಪಿಸಿತು. ಆದರೆ ಅಂದು ಕತ್ತಿಯಿಂದ ಸತ್ತ ಜನರಿಗಿಂತ ಹೆಚ್ಚು ಜನರು ಕಾಡಿನಲ್ಲಿ ಸತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯುದ್ಧವು ಸುತ್ತಣ ಪ್ರದೇಶಗಳಿಗೆ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಸತ್ತವರಿಗಿಂತ, ಮರುಳುಗಾಡಿನಲ್ಲಿ ಸತ್ತವರ ಸಂಖ್ಯೆಯೇ ಹೆಚ್ಚಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿವಸ ಕತ್ತಿಗಿಂತ ಕಾಡೇ ಹೆಚ್ಚಿನ ಸಂಹಾರಕ್ಕೆ ಕಾರಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.